ಸ್ಕೂಟರ್ ಮರಕ್ಕೆ ಢಿಕ್ಕಿ: ಸವಾರ ಸಾವು

ಸ್ಕೂಟರ್ ಮರಕ್ಕೆ ಢಿಕ್ಕಿ: ಸವಾರ ಸಾವು

ಉಳ್ಳಾಲ: ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಅಂಚಿನ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ.

ಮಾಡೂರು ಶಿವಾಜಿನಗರದ ನಿವಾಸಿ ನಾಗೇಶ್ ವಿ. (50) ಮೃತಪಟ್ಟ ವ್ಯಕ್ತಿ.

ನಾಗೇಶ್ ಅವರು ಕುಟುಂಬ ಸಮೇತರಾಗಿ ಕಳೆದ ಮೂರು ವರುಷಗಳಿಂದ ಮಾಡೂರಿನಲ್ಲಿ ನೆಲೆಸಿದ್ದರು.ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಕಾಲೇಜಿನ ಬಸ್ಸು ಕಂಡಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗೇಶ್ ಬುಧವಾರ ಕೆಲಸಕ್ಕೆ ರಜೆಯಿದ್ದ ಕಾರಣ ಬೀರಿ ಪೇಟೆಯಿಂದ ಸ್ಕೂಟರಲ್ಲಿ ತೆಂಗಿನ ಕಾಯಿಗಳನ್ನು ಖರೀದಿಸಿ ಮನೆಗೆ ಹೋಗುತ್ತಿದ್ದ ಸಂದರ್ಭ ಸ್ಕೂಟರ್ ನಿಯಂತ್ರಣ ತಪ್ಪಿ ಮರಕ್ಕೆ ಹೊಡೆದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದರಿಂದ ಗಂಭೀರ ಗಾಯಗೊಂಡು ಮೃತಪಟ್ಟ ನಾಗೇಶ್ ಪತ್ನಿ ಮತ್ತು ಏಕೈಕ ಪುತ್ರಿಯನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article