ಮಗನ ಹುಟ್ಟುಹಬ್ಬಕ್ಕೆ ಕಡವೆ ಹತ್ಯೆ

ಮಗನ ಹುಟ್ಟುಹಬ್ಬಕ್ಕೆ ಕಡವೆ ಹತ್ಯೆ

ಉಪ್ಪಿನಂಗಡಿ: ಮಗನ ಹುಟ್ಟುಹಬ್ಬಕ್ಕೆ ರಕ್ಷಿಣಾರಣ್ಯದಿಂದ ಕಡವೆಯನ್ನು ಗುಂಡಿಕ್ಕಿ ಕೊಂದು ಅದರ ಮಾಂಸವನ್ನು ಫ್ರಿಡ್ಜ್‌ನಲ್ಲಿ ದಾಸ್ತಾನು ಇರಿಸಲಾಗಿದ್ದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ಸ್ವಾಧೀನಪಡಿಸಿಕೊಂಡಿದೆ. 

ಆರೋಪಿಗಳನ್ನು ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್ ಮತ್ತವರ ಸಹವರ್ತಿಗಳು ಎಂದು ಗುರುತಿಸಲಾಗಿದ್ದು, ಸದ್ಯ ಆರೋಪಿಗಳು ಪರಾರಿಯಾಗಿದ್ದಾರೆ. ಇವರು ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಅದನ್ನು ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಪ್ರೀಝರ್‌ನಲ್ಲಿ ಇರಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ ಅರಣ್ಯಾಧಿ ಕಾರಿಗಳ ನಿರ್ದೇಶನದ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಯತೀಂದ್ರ ಇಲಾಖಾ ಸಿಬಂದಿ ಸುನಿಲ್, ಶಿವಾನಂದ ಅವರ ತಂಡ ಸುರೇಶ್ ಮನೆಗೆ ದಾಳಿ ನಡೆಸಿ ಸಂಗ್ರಹಿಸಿಟ್ಟ ಮಾಂಸ ಹಾಗೂ ಹತ್ಯೆಗೆ ಬಳಸಲಾದ ಕೋವಿಯನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆ ವೇಳೆ ಆರೋಪಿಗಳು ಗುಂಡ್ಯ ಹೊಳೆಯನ್ನು ಈಜಿ ದಾಟುವ ಮೂಲಕ ಪರಾರಿಯಾಗಿದ್ದಾರೆ. ವಲಯಾಧಿಕಾರಿಯಿಂದ ತನಿಖೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article