ರಾಷ್ಟ್ರಮಟ್ಟಕ್ಕೆ ವಿದ್ಯಾರ್ಥಿನಿ ಆಯ್ಕೆ
Sunday, November 17, 2024
ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ ಕೋಲಾರ ಜಿಲ್ಲೆಯ ಆಶ್ರಯದಲ್ಲಿ ಕೋಲಾರದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ಬಾಲಕ, ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬಂಟ್ವಾಳ ತಾ.ನ ಮೊಡಂಕಾಪು, ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ಹರಿಪ್ರಿಯಾ ಇವರು ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಸಂಚಾಲಕರಾದ ವಲೇರಿಯನ್ ಡಿಸೋಜಾ, ಶಾಲಾ ಮುಖ್ಯೋಪಾಧ್ಯಾಯ ಮೆಲ್ವಿನ್ ಲೋಬೋ, ಶಿಕ್ಷಕ ಮತ್ತು ರಕ್ಷಕ ಸಂಘದ ಸಮಿತಿಯ ಸದಸ್ಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.