
ಸೈಕಲ್‌ಗೆ ಕಾರು ಢಿಕ್ಕಿ: ಸವಾರ ಮೃತ್ಯು
Tuesday, November 19, 2024
ಬಂಟ್ವಾಳ: ತಾಲೂಕಿನ ಸಜೀಪಮುನ್ನೂರು ಗ್ರಾಮದ ಗುಡ್ಡೆಯಂಗಡಿ ಬ್ರಿಡ್ಜ್ ಬಳಿ ಸೈಕಲ್‌ಗೆ ಕಾರೊಂದು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸೈಕಲ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತ ಸೈಕಲ್ ಸವಾರರನ್ನು ಸ್ಥಳೀಯ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ.
ಮಾರ್ನಬೈಲು ಕಡೆಯಿಂದ ಮೆಲ್ಕಾರ್ ನತ್ತ ಸಂಚರಿಸುತ್ತಿದ್ದ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಸೈಕಲಿನ ಹಿಂಬದಿಗೆ ಢಿಕ್ಕಿ ಹೊಡೆದಿತ್ತೆನ್ನಲಾಗಿದೆ.
ಪರಿಣಾಮ ಸೈಕಲ್ ಸವಾರ ಅಶ್ರಫ್ ಅವರು ಸೈಕಲ್ ಸಮೇತ ಡಾಮಾರು ರಸ್ತೆಗೆ ಬಿದ್ದು ಗಂಭೀರ ಸ್ವರೂಪದ ಗಾಯಗೊಂಡಿದ್ದರು.ಇವರನ್ನು ಕಾರುಚಾಲಕ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದರು.
ಅಲ್ಲಿ ಗಾಯಾಳು ಚಿಕಿತ್ಸೆಗೆ ಸಗಪಂದಿಸದೆ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.