
ಕಡೆಗೋಳಿಯಲ್ಲಿ ಬೈಕ್‌ಗೆ ಬಸ್ ಢಿಕ್ಕಿ ಒರ್ವನ ಮೃತ್ಯು: ಇನ್ನೋರ್ವ ಗಂಭೀರ
ಬಂಟ್ವಾಳ: ರಾ.ಹೆ.ಯ ಕಡೆಗೋಳಿ ಎಂಬಲ್ಲಿ ಭಾನುವಾರ ರಾತ್ರಿ ಖಾಸಗಿ ಬಸ್ ಬೈಕ್‌ಗೆ ಢಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಕಡೆಗೋಳಿ ನಿವಾಸಿ ಪ್ರವೀಣ (30) ಎಂದು ಗುರುತಿಸಲಾಗಿದೆ. ಇವರ ಸ್ನೇಹಿತ ಸಂದೀಪ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರಿಬ್ಬರು ಸೇಲ್ಸ್ ಮ್ಯಾನ್ ಕೆಲಸ ಮಾಡುತ್ತಿದ್ದು, ತನ್ನ ಕೆಲಸವನ್ನು ಮುಗಿಸಿಕೊಂಡು ಜೊತೆಯಾಗಿ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಮಂಗಳೂರಿನಿಂದ ಬಿ.ಸಿ. ರೋಡಿನತ್ತ ಅತೀ ವೇಗವಾಗಿ ಧಾವಿಸಿ ಬಂದ ಖಾಸಗಿ ಬಸ್ ಢಿಕ್ಕಿಯಾಗಿದೆ. ಪರಿಣಾಮ ಪ್ರವೀಣ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಸಂದೀಪ್ ಗಂಭೀರ ಸ್ವರೂಪದ ಗಾಯಗೊಂಡಿದ್ದರು.
ಸ್ಥಳೀಯರು ತಕ್ಷಣ ಗಾಯಾಳುವನ್ನು ತುಂಬೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.
ಘಟನೆಯ ಹಿನ್ನಲೆಯಲ್ಲಿ ಸ್ಥಳೀಯರು ಜಮಾಯಿಸಿ ಖಾಸಗಿ ಬಸ್ಸಿನ ಧಾವಂತದ ಚಾಲನೆಗೆ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಈ ಸಂದರ್ಭ ಕೆಲಹೊತ್ತುಗಳ ಕಾಲ ಸ್ಥಳದಲ್ಲಿ ಆತಂಕದ ವಾತಾವರಣವು ಉಂಟಾಯಿತು.
ಸುದ್ದಿ ತಿಳಿದ ಬಂಟ್ವಾಳ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.