.jpeg)
ಮಟ್ಕಾ ದಂಧೆ: ಇಬ್ಬರ ಬಂಧನ
Saturday, November 30, 2024
ಬಂಟ್ವಾಳ: ಅಕ್ರಮ ಮಟ್ಕಾ ದಂಧೆಯಲ್ಲಿ ನಿರತರಾಗಿದ್ದ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಿ.ಕಸಬಾ ಗ್ರಾಮದ ತುಂಬೆ ಜಂಕ್ಷನ್ ಎಂಬಲ್ಲಿ ಬಂಧಿಸಿದ್ದಾರೆ.
ಉಳ್ಳಾಲ ತಾಲೂಕಿನ ಬೋಳಿಯಾರು ನಿವಾಸಿ ಅಬೂಬಕ್ಕರ್ (38) ಹಾಗೂ ಬಂಟ್ವಾಳ ತಾಲೂಕು ಸಜಿಪಮೂಡ ಗ್ರಾಮದ ನಿವಾಸಿ ದಿನೇಶ್ ಕುಮಾರ್ (36) ಬಂಧಿತರು.
ಶುಕ್ರವಾರ ಸಂಜೆ ಬಿ ಕಸಬಾ ಗ್ರಾಮದ ತುಂಬೆ ಜಂಕ್ಷನ್ ಬಳಿಯಿರುವ ಹೋಟೇಲೊಂದರ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳು ಅಂಕೆ ಸಂಖ್ಯೆಗಳ ಮೇಲೆ ಹಣವನ್ನು ಪಣವನ್ನಾಗಿಟ್ಟುಕೊಂಡು ಅಕ್ರಮವಾಗಿ ಮಟ್ಕಾ ಚೀಟಿ ಬರೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ನಗರ ಠಾಣಾ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಬಂಧಿತರಿಂದ ಪೊಲೀಸರು 2,850 ರೂ. ನಗದು ಹಣ ಹಾಗೂ ಮಟ್ಕಾ ಚೀಟಿಗಳನ್ನು ವಶಪಡಿಸಿ ಪ್ರಕರಣ ದಾಖಲಿಸಿದ್ದಾರೆ.