
ಕಳ್ಳತನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಬಂಟ್ವಾಳ: ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾಸರಗೋಡಿನಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಪುತ್ತೂರು ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್ ಶರೀಫ್(44) ಬಂಧಿತ ಆರೋಪಿಯಾಗಿದ್ದಾನೆ.
2004ರ ನ. 7ರಂದು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣದಲ್ಲಿ ಈತ ಆರೋಪಿ ಯಾಗಿದ್ದು,ಕೃತ್ಯದ ಬಳಿಕ ತಲೆಮರೆಸಿಕೊಂಡ್ಡಿದ್ದನು.
ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ತನ್ನ ವಿಳಾಸವನ್ನು ಬದಲಾಯಿಸಿಕೊಂಡು ತಿರುಗಾಡುತ್ತಿದ್ದ ಈತ ಕಾಸರಗೋಡು ಜಿಲ್ಲೆಯ ಪುತ್ತಿಗೆ ಎಂಬಲ್ಲಿ ವಾಸವಾಗಿರುವ ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿ ಇತ್ತೀಚಿಗಷ್ಠೆ ಇತ ನ್ಯಾಯಾಲಯದ ಜಾಮೀನಿನ ಮೇಲೆ ಬಿಡುಗಡೆ ಆಗಿರುತ್ತಾನೆ.
ಬಂಟ್ವಾಳ ಡಿವೈಎಸ್ಪಿ ವಿಜಯಪ್ರಸಾದ್ ರವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಶಿವಕುಮಾರ್ ಅವರ ನೇತೃತ್ವದಲ್ಲಿ ಪಿಎಸ್‌ಐ ಗಳಾದ ಹರೀಶ್ ಎಂ ಆರ್ ಮತ್ತು ಮೂರ್ತಿ ಮತ್ತವರ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿದ್ದರು.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಂಗ ಬಂಧನ ವಿಧಿಸಿದೆ.