.jpeg)
ಮಾದಕ ವಸ್ತು ಸೇವನೆ: ಯುವಕರಿಬ್ಬರ ಬಂಧನ
Saturday, November 30, 2024
ಬಂಟ್ವಾಳ: ತಾಲೂಕಿನ ಪುದು ಗ್ರಾಮದ ಕುಂಪನಮಜಲು ಎಂಬಲ್ಲಿ ಮಾದಕ ವಸ್ತು ಸೇವಿಸಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪದಲ್ಲಿ ಯುವಕರಿಬ್ಬರನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪುದು ಗ್ರಾಮದ ನಿವಾಸಿಗಳಾದ ಮೊಹಮ್ಮದ್ ದಾವೂದ್ ಹಕೀಂ ಹಾಗೂ ಮೊಹಮ್ಮದ್ ಮುಸ್ತಾಫ ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಗ್ರಾಮಾಂತರ ಠಾಣಾ ಎಸ್‌ಐ ಹರೀಶ್ ಎಮ್.ಆರ್. ಮತ್ತವರ ಸಿಬ್ಬಂದಿಗಳು ಆರೋಪಿಗಳಿಬ್ಬರು ಮಾದಕ ವಸ್ತು ಸೇವನೆಗೈದು ನಶೆಯಲ್ಲಿದ್ದಂತೆ ಕಂಡು ಬಂದ ಹಿನ್ನಲೆಯಲ್ಲಿ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕದ್ರವ್ಯ ಸೇವಿಸಿರುವುದು ದೃಢಪಟ್ಟಿರುತ್ತದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.