
ಬಾರಕೂರು ಕಾಲೇಜು: ಸಂವಿಧಾನ ದಿನಾಚರಣೆ
Thursday, November 28, 2024
ಬಾರಕೂರು: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರ್ಕೂರು ಇಲ್ಲಿ ನ.26 ರಂದು ಚುನಾವಣಾ ಸಾಕ್ಷರತಾ ಸಂಘ ಹಾಗೂ ರೋವರ್ಸ್ ರೇಂಜರ್ಸ್ ಘಟಕದ ವತಿಯಿಂದ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ನಿವೃತ್ತ ಪ್ರಾಂಶುಪಾಲರಾದ ಡಾ. ದಿನೇಶ್ ಹೆಗ್ಡೆ ಮೊಳಹಳ್ಳಿ ಇವರು ಸಂವಿಧಾನದ ಮೌಲ್ಯಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಅವರು ಸಂವಿಧಾನ ಪೀಠಿಕೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶೈಲಜಾ ಇವರು ಸಂವಿಧಾನ ಪೀಠಿಕೆಯನ್ನು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯಾಗಿ ಬೋಧಿಸಿದರು. ಪ್ರಾಂಶುಪಾಲರಾದ ಪ್ರೊ. ಭಾಸ್ಕರ್ ಶೆಟ್ಟಿ ಸಳ್ವಾಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಸಂವಿಧಾನದ ಕುರಿತು ಓದುವುದರ ಜೊತೆಗೆ ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆಯ ಕುರಿತು ಅರಿಯುವುದು ಮುಖ್ಯ ಎಂದರು. ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಲಕ್ಷ್ಮಿ ಪ್ರಾರ್ಥಿಸಿದರು. ಚುನಾವಣಾ ಸಾಕ್ಷರತಾ ಸಂಘದ ಸಂಚಾಲಕರಾದ ಸತೀಶ್ ಕುಮಾರ್ ಬಿ ಡಿ ಸ್ವಾಗತಿಸಿ, ತೃತೀಯ ಬಿಸಿಎ ವಿದ್ಯಾರ್ಥಿನಿ ನಿರ್ಮಲ ಕರ್ವಾಲೊ ವಂದಿಸಿದರು.