
ಭಾರಿ ಪ್ರಮಾಣದ ಅಕ್ರಮ ಮದ್ಯ ವಶ
Thursday, November 14, 2024
ಕಾರ್ಕಳ: ಇಲ್ಲಿನ ಬೋಳ ಗ್ರಾಮದಲ್ಲಿ ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮದ್ಯದ ಬಾಕ್ಸ್ ಗಳನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿರುವ ಘಟನೆ ಗುರುವಾರ ನಡೆದಿದೆ.
ಅಬಕಾರಿ ಉಪ ಆಯುಕ್ತೆ ಬಿಂದು ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ದುಬಾರಿ ಮೌಲ್ಯದ ಮದ್ಯದ ಬಾಟಲಿಗಳು ಬಾಕ್ಸ್ ಸಮೇತ ಪತ್ತೆಯಾಗಿದೆ. 200ಕ್ಕೂ ಅಧಿಕ ಬಾಕ್ಸ್ ಗಳನ್ನು ವಶಕ್ಕೆ ಪಡೆದಿದ್ದು, ಇವು ನಕಲಿ ಮದ್ಯವೋ, ಅಸಲಿ ಮದ್ಯವೋ ಎಂಬ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ.
ಗ್ರಾಮೀಣ ಭಾಗದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮದ್ಯ ದಾಸ್ತಾನು ಮಾಡಿರುವ ಬಗ್ಗೆ ಅಧಿಕಾರಿಗಳೆ ಬೆಸ್ತು ಬಿದ್ದಿದ್ದು, ಸಂಬಂಧಪಟ್ಟವರ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಪರಿಶೀಲನೆ ನಡೆಯುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ಶೀಘ್ರ ವಿವರವಾದ ಮಾಹಿತಿ ನೀಡಲಾಗುವುದು ಎಂದು ಅಬಕಾರಿ ಡಿಸಿ ಬಿಂದು ತಿಳಿಸಿದ್ದಾರೆ.