
ಅಂಗನವಾಡಿ ಶಿಕ್ಷಕಿ ಆತ್ಮಹತ್ಯೆ
Friday, November 15, 2024
ಕಾರ್ಕಳ: ಕಳೆದ ತಿಂಗಳ ಹಿಂದೆ ಗಂಡ ತೀರಿಕೊಂಡ ಬಳಿಕ ಮಾಸಿಕವಾಗಿ ಕೊರಗುತ್ತಿದ್ದಂತ ಅಂಗನವಾಡಿ ಟೀಚರ್ ಮನೆ ಸಮೀಪದ ಬಾವಿಗೆಹಾರಿ ಆತ್ಮಹತ್ಯೆಗೈದ ಘಟನೆ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ಇಂದು ನಡೆದಿದೆ. ಸೌಮ್ಯ(39) ಎಂಬವರು ಆತ್ಮಹತ್ಯೆಗೆ ಶರಣಾದವರು.
ಮಿಯ್ಯಾರು ಚರ್ಚ್ ಬಳಿಯ ಅಂಗನವಾಡಿಯಲ್ಲಿ ಟೀಚರ್ ಆಗಿ ಕಳೆದ 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರ ಪತಿ ಒಂದು ತಿಂಗಳ ಹಿಂದೆ ಮೃತಪಟ್ಟಿದ್ದರು. ಇದರಿಂದ ನೊಂದಿದ್ದ ಸೌಮ್ಯ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.