ನ.9 ರಂದು ಸಾಸ್ತಾನ ಟೋಲ್ ಪ್ಲಾಜಾಗೆ ಮುತ್ತಿಗೆ

ನ.9 ರಂದು ಸಾಸ್ತಾನ ಟೋಲ್ ಪ್ಲಾಜಾಗೆ ಮುತ್ತಿಗೆ

ಕುಂದಾಪುರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಸ್ತಾನ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ವತಿಯಿಂದ ನ.9 ರ ಶನಿವಾರದಂದು  ಸಂಜೆ 5 ಗಂಟೆಗೆ ಬೃಹತ್ ಪ್ರತಿಭಟನೆ ಹಾಗೂ ಟೋಲ್ ಮುತ್ತಿಗೆ ನಡೆಯಲಿದೆ.

ಸಂಪೂರ್ಣ ಹದಗೆಟ್ಟಿರುವ ಹೊಂಡ ಗುಂಡಿಗಳಿಂದ ತುಂಬಿರುವ ಹೆದ್ದಾರಿ ಟೋಲ್ ರಸ್ತೆ, ಉರಿಯದ ಬೀದಿ ದೀಪಗಳು, ಬೆಳೆದ ಕಳೆಗಿಡಗಳು, ಪಾದಚಾರಿಗಳಿಗೆ ದಾರಿಯ ಸಮಸ್ಯೆ ಹಾಗೂ ಸ್ಥಳೀಯ ವಾಹನಗಳಲ್ಲಿ ಸಂಸ್ಥೆಯ ಹೆಸರಿನಲ್ಲಿ ನೋಂದಾಯಿಸಿರುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸುತ್ತಿರುವುದನ್ನು ಖಂಡಿಸಿ ನಾಳೆ ಸಂಜೆ 5 ಗಂಟೆಗೆ ಟೋಲ್ ಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ಸಮಿತಿ ತಿಳಿಸಿದೆ.

ಸಂಸ್ಥೆಯ ಹೆಸರಿನಲ್ಲಿ ನೋಂದಾಯಿತ ವಾಹನಗಳಿಗೆ ಟೋಲ್ ವಿಧಿಸುವ ನೆಪದಲ್ಲಿ ಸ್ಥಳೀಯ ಶಾಲೆಗಳ ವಾಹನಕ್ಕೆ ಹಾಗೂ ಸ್ಥಳೀಯ ಕೆಲವು ಉದ್ಯಮಗಳ ವಾಹನಗಳಿಗೆ ಟೋಲ್ ವಿಧಿಸುವುದರ ಮೂಲಕ ಟೋಲ್ ಕಟ್ಟೆಯವರು ಒಡೆದು ಅಳುವ ನೀತಿಯನ್ನು ಅನುಸರಿಸುತ್ತಿದ್ದಾರೆ ಇದನ್ನು ಮುಂದುವರಿಸಿಕೊಂಡು ಕಮರ್ಷಿಯಲ್ ವಾಹನಗಳ ವಿಚಾರಕ್ಕೆ ಬರುತ್ತಾರೆ. ಷಡ್ಯಂತ್ರದ ವಿರುದ್ಧ ಧ್ವನಿ ಎತ್ತಬೇಕಾಗಿದೆ ಎಂದು ಹೋರಾಟ ಸಮಿತಿ ಅಧ್ಯಕ್ಷರು ಆಗ್ರಹಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article