ಅಖಿಲ ಭಾರತ ಸಹಕಾರ ಸಪ್ತಾಹ: 16 ರಂದು ನಗರದಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ

ಅಖಿಲ ಭಾರತ ಸಹಕಾರ ಸಪ್ತಾಹ: 16 ರಂದು ನಗರದಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ


ಮಂಗಳೂರು: 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನ. 16ರಂದು ನಗರದ ಕರಾವಳಿ ಉತ್ಸವ ಮೈದಾನಲ್ಲಿ ಪೂರ್ವಾಹ್ನ 10ರಿಂದ  ‘ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ಎಂಬ ವಿಷಯದೊಂದಿಗೆ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ.

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್, ’ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ. ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಈ ರಾಜ್ಯಮಟ್ಟದ ಕಾರ್ಯಕ್ರಮ ನಡೆಯಲಿದೆ‘ ಎಂದರು.

ನ.16 ರಂದು ನಡೆಯುವ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿಸುವ ಉದ್ದೇಶದಿಂದ ವಸ್ತುಪ್ರದರ್ಶನ ಮಳಿಗೆಗಳನ್ನು ಆಯೋಜಿಸಲಾಗಿದ್ದು, ಸ್ಪೀಕರ್ ಯು.ಟಿ. ಖಾದರ್ ಉದ್ಘಾಟಿಸುವರು. ಸಹಕಾರ ಸಪ್ತಾಹವನ್ನು ರಾಜ್ಯ ಸಹಕಾರ ಸಚಿವ  ಕೆ.ಎನ್. ರಾಜಣ್ಣ ಉದ್ಘಾಟಿಸುವರು, ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ”ವನ್ನು ದ. ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದಾರೆ. “ಶತಮಾನೋತ್ಸವ ಪೂರೈಸಿದ ಸಹಕಾರ ಸಂಘಗಳಿಗೆ ಪುರಸ್ಕಾರ"ವನ್ನು ಶಾಸಕ, ಮಾಜಿ ಉಪ ಮುಖ್ಯಮಂತ್ರಿ  ಲಕ್ಷ್ಮಣ ಸವದಿ ಪ್ರದಾನಿಸುವರು. ‘ಉತ್ತಮ ಸ್ವ-ಸಹಾಯ ಸಂಘಗಳಿಗೆ ಪುರಸ್ಕಾರವನ್ನು ಶಾಸಕ ಹಾಗೂ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಪ್ರದಾನಿಸವರು. ಸಹಕಾರ ಸಪ್ತಾಹದ ಧ್ವಜಾರೋಹಣವನ್ನು  ಸಂಸದ ಕ್ಯಾ. ಬ್ರಿಜೇಶ್ ಚೌಟ ಇವರು ನೆರವೇರಿಸಲಿರುವರು. ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಮಂಗಳೂರು ಇದರ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ವಹಿಸುವರು. ‘ಸಹಕಾರ ಜಾಥಾ" ಉದ್ಘಾಟನೆಯನ್ನು ಶಾಸಕ ಡಿ.ವೇದವ್ಯಾಸ್ ಕಾಮತ್ ನೆರವೇರಿಸುವರು. ಶಾಸಕರಾದ ಡಾ.  ಭರತ್ ಶೆಟ್ಟಿ ವೈ, ಮಂಜುನಾಥ ಭಂಡಾರಿ, ಯಶ್‌ಪಾಲ್ ಎ. ಸುವರ್ಣ, ಐವನ್ ಡಿ.ಸೋಹಾ ಹಾಗೂ ಕಿಶೋರ್ ಕುಮಾರ್ ಬೊಟ್ಯಾಡಿ ಮುಖ್ಯ ಅತಿಥಿಗಳಾಗಿರುವರು. ನಬಾರ್ಡ್ ಮುಖ್ಯ ಮಹಾಪ್ರಬಂಧಕ ಕೆ.ವಿ.ಎಸ್.ಎಸ್.ಎಲ್.ವಿ. ಪ್ರಸಾದ್ ರಾವ್, ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕಷ ಕೆ. ಪಿ. ಸುಚರಿತ ಶೆಟ್ಟಿ, ಅಜಯ್ ನಾಗಭೂಷಣ್ ಎಂ.ಎನ್., ಟಿ. ಎಚ್.ಎಂ. ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ, ಕಮಿಷನರ್ ಅನುಪಮ್ ಅಗರ್ ವಾಲ್ ಭಾಗವಹಿಸುವರು ಎಂದರು.

‘ಸಹಕಾರ ಮಾಣಿಕ್ಯ ಪ್ರಶಸ್ತಿ‘

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸಿ 2024ನೇ ಸಾಲಿನಿಂದ ”ಸಹಕಾರ ಮಾಣಿಕ್ಯ“ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಪ್ರಶಸ್ತಿ ಜೊತೆಗೆ 5 ಗ್ರಾಂ. ಚಿನ್ನದ ಪದಕ, 10000 ರೂ. ನಗದು ಹಾಗೂ ಪಾರಿತೋಷಕ ನೀಡಲಾಗುವುದು.

ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ಉಭಯ ಜಿಲ್ಲೆಗಳ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕೆ. ಪಿ. ಸುಚರತ ಶೆಟ್ಟಿ, ಬ್ಯಾಂಕಿನ ನಿರ್ದೇಶಕರುಗಳಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಶಶಿಕುಮಾರ್ ರೈ ಬಿ., ಎಸ್. ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಪಿ. ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಎಸ್. ರಾಜು ಪೂಜಾರಿ, ಸ್ಕ್ಯಾಡ್ಸ್ ಅಧ್ಯಕ್ಷ  ರವೀಂದ್ರ ಕಂಬಳಿ, ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್. ರಮೇಶ್ ಹಾಗೂ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article