
ಡಿ.1 ರಂದು ಡಾ. ಎಸ್.ಆರ್. ಹರೀಶ್ ಆಚಾರ್ಯ ಅವರಿಗೆ ಅಭಿನಂದನಾ ಸಮಾರಂಭ
Friday, November 29, 2024
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಚಿನ್ನದ ಕೆಲಸಗಾರರ ಸಂಘ (ರಿ), ವಿಶ್ವಕರ್ಮ ಸಹಕಾರಿ ಬ್ಯಾಂಕ್ ಹಿತೈಷಿಗಳ ಬಳಗ ಮತ್ತು ಸಹಕಾರಿ ಮಿತ್ರರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸಹಕಾರದಿಂದ ‘ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತ ಡಾ. ಎಸ್.ಆರ್. ಹರೀಶ್ ಆಚಾರ್ಯ ಅವರಿಗೆ ಡಿಸೆಂಬರ್ 1 ರಂದು ನಗರದ ರಥಬೀದಿಯ ಪಟ್ಟೆ ಲಿಂಗಪ್ಪಾಚಾರ್ಯ ಕಲ್ಯಾಣ ಮಂಟಪದಲ್ಲಿ ಸಂಜೆ 5 ಗಂಟೆಗೆ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.