
ಡಾ. ಎಂ.ಎನ್. ರಾಜೇಂದ್ರ ಕುಮಾರ್‌ಗೆ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ-2024
ಮಂಗಳೂರು: ಕರ್ನಾಟಕ ರಾಜ್ಯ ಏಕೀಕರಣಕ್ಕೆ 69 ವರ್ಷ ತುಂಬಿದ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಬೆಂಗಳೂರು ಇದರ ವತಿಯಿಂದ ನೀಡಲಾಗುವ ಪ್ರತಿಷ್ಟಿತ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ ಗೊಂಡಿದ್ದಾರೆ.
ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಸಂಸ್ಥೆ 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪತ್ರಿಕೋದ್ಯಮದ ಇತಿಹಾಸದಲ್ಲಿ ಮೊದಲ ಬಾರಿಗೆ ನೀಡುವ ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿಗೆ ಸಹಕಾರ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಗೈದಿರುವ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್ ಅಭಿನಂದನಾ ಪತ್ರದ ಮೂಲಕ ತಿಳಿಸಿದ್ದಾರೆ.
ಸಹಕಾರಿ ರಂಗದಲ್ಲಿ ಹೊಸ ಹೊಸ ಅವಿಷ್ಕಾರದೊಂದಿಗೆ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಾ , ರಾಜ್ಯ-ರಾಷ್ಟ್ರ ಮಟ್ಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್ ) ಗೆ ಘನತೆ, ಗೌರವವನ್ನು ತಂದುಕೊಟ್ಟ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಕಳೆದ 30 ವರ್ಷಗಳಿಂದ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ಕಾರಣರಾಗಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಗೈದ ನಿಸ್ವಾರ್ಥ ನಾಯಕತ್ವವನ್ನು ಗುರುತಿಸಿ ಇವರಿಗೆ ದಿನಾಂಕ 27-11-2024ರಂದು ಬೆಂಗಳೂರು ನಗರದ ಜೆ.ಸಿ.ರಸ್ತೆ ಯಲ್ಲಿರುವ ಸರ್. ಪುಟ್ಟಣ್ಣ ಚೆಟ್ಟಿ ಪುರಭವನ (ಟೌನ್ ಹಾಲ್) ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.