ಡಿ.3, 4ರಂದು ಮಂಗಳೂರಿನಲ್ಲಿ ಬಹುಸಂಸ್ಕೃತಿ ಉತ್ಸವ

ಡಿ.3, 4ರಂದು ಮಂಗಳೂರಿನಲ್ಲಿ ಬಹುಸಂಸ್ಕೃತಿ ಉತ್ಸವ

ಮಂಗಳೂರು: ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ, ದಕ್ಷಿಣ ಕನ್ನಡ, ಕೊಡಗು, ಉಡುಪಿ ಜಿಲ್ಲಾಡಳಿತಗಳ ಸಹಭಾಗಿತ್ವದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ ಅಕಾಡೆಮಿ, ಕೊಂಕಣಿ ಅಕಾಡೆಮಿ, ಅರೆಭಾಷೆ ಅಕಾಡೆಮಿ, ಕೊಡವ ಮತ್ತು ಯಕ್ಷಗಾನ ಅಕಾಡೆಮಿಗಳ ಜಂಟಿ ಆಶ್ರಯದಲ್ಲಿ ಡಿ.3 ಮತ್ತು 4 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ ಕಾರ್ಯಕ್ರಮ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಹು ಸಂಸ್ಕೃತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್ ಉಪಸ್ಥಿತರಿರಲಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ವಹಿಸಲಿದ್ದಾರೆ.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್ ಪೊನ್ನಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್ ಬೋಸರಾಜು ಉಪಸ್ಥಿತರಿರುವರು.

ಡಿ. 3ರಂದು ಬೆಳಿಗ್ಗೆ 9 ಗಂಟೆಗೆ ಸಾಂಸ್ಕೃತಿಕ ಮೆರವಣಿಗೆ ಉದ್ಘಾಟನೆ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆಯಲಿದ್ದು, ಬಹು ಸಂಸ್ಕೃತಿ ಉತ್ಸವ ಕಾರ್ಯಕ್ರಮದ ಉದ್ಘಾಟನೆ ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.

ಬಹುಸಂಸ್ಕೃತಿ ಉತ್ಸವದಲ್ಲಿ ಸಾಂಸ್ಕೃತಿಕ ಕಲಾತಂಡಗಳ ಭವ್ಯ ಮೆರವಣಿಗೆ, ವಿವಿಧ ಅಕಾಡೆಮಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ವಸ್ತು ಪ್ರದರ್ಶನ, ಪುಸ್ತಕ ಪ್ರದರ್ಶನ, ಚಿತ್ರಕಲಾ ಪ್ರದರ್ಶನ, ಶಿಲ್ಪಕಲಾ ಪ್ರದರ್ಶನ, ಹಾಗೂ ವಿದ್ಯಾರ್ಥಿ ಸಮಾವೇಶ ಮತ್ತು ಸಾಂಪ್ರದಾಯಿಕ ಆಹಾರೋತ್ಸವ ನಡೆಯಲಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article