
ನ.6 ರಂದು “ಗುರು ಚಿಂತನ ಯುವ ಮಂಥನ” ಆನ್ಲೈನ್ ವಿಶೇಷ ಉಪನ್ಯಾಸ
Tuesday, November 5, 2024
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ವತಿಯಿಂದ ನ.6 ರಂದು ಬೆಳಗ್ಗೆ 10 ಗಂಟೆಗೆ ಗೂಗಲ್ ಮೀಟ್.ನಲ್ಲಿ “ಗುರು ಚಿಂತನ ಯುವ ಮಂಥನ” ಆನ್ಲೈನ್ ವಿಶೇಷ ಉಪನ್ಯಾಸ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರು ವಹಿಸಲಿದ್ದಾರೆ. ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಅವರು ಉಪಸ್ಥಿತಿ ವಹಿಸಲಿದ್ದಾರೆ.
ಪೀಠದ ನಿರ್ದೇಶಕ ಡಾ. ಜಯರಾಜ್ ಎನ್. ಇವರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಅಧ್ಯಯನ ಪೀಠದ ಸ್ಥಾಪಕ ನಿರ್ದೇಶಕ ಮುದ್ದು ಮೂಡುಬೆಳ್ಳೆ ಅವರು “ನಾರಾಯಣಗುರು ಸುಧಾರಣಾ ಚಳುವಳಿ ಮತ್ತು ಅನುಯಾಯಿಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೂಗಲ್ ಮೀಟ್ ಲಿಂಕ್: meet.google.com/ihy-awvp-hwt