ಕಾಂಗ್ರೆಸ್ ವತಿಯಿಂದ ವಿಜಯೋತ್ಸವ

ಕಾಂಗ್ರೆಸ್ ವತಿಯಿಂದ ವಿಜಯೋತ್ಸವ


ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದು, ದ. ಕ. ಜಿಲ್ಲಾ ಕಾಂಗ್ರೆಸ್ ವಿಜಯೋತ್ಸವ ಆಚರಿಸುವ ಮೂಲಕ ಗೆಲುವನ್ನು ಸಂಭ್ರಮಿಸಿದೆ.

ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಕಾಂಗ್ರೆಸ್ ಕಾರ್ಯಕರ್ತರು  ಕದ್ರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯೆದುರು ಪಟಾಕಿ ಸಿಡಿಸಿ ಜೈಕಾರ ಹಾಕಿ ಸಂಭ್ರಮಿಸಿದರು ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಎಲ್ಲಾ ಚುನಾವಣೋತ್ತರ ಫಲಿತಾಂಶಗಳನ್ನು ಮೀರಿ ಬಂದಿದೆ. ಈ ಮೂಲಕ ಜನತೆ ಸಿದ್ಧರಾಮಯ್ಯ ನೇತೃತ್ವದ ಸರಕಾರದ ಅಭಿವೃದ್ಧಿ ಪೂರಕ ಕೆಲಸಕ್ಕೆ ಬೆಂಬಲ ನೀಡಿದಂತಾಗಿದೆ. ಜಾರ್ಕಂಡ್ನಲ್ಲಿಯೂ ಸಮೀಕ್ಷೆಯನ್ನು ಮೀರಿ ಕಾಂಗ್ರೆಸ್‌ಗೆ ಗೆಲುವು ದೊರಕಿದೆ. ಮಹಾರಾಷ್ಟ್ರದ ಕಾಂಗ್ರೆಸ್ ಸೋಲನ್ನು ನಾವು ಸ್ವೀಕರಿಸುತ್ತೇವೆ. ಆದರೆ, ಮೀರಾ ಭವರ್ ಕ್ಷೇತ್ರದ ಚುನಾವಣಾ ಉಸ್ತುವಾರಿ ವಹಿಸಿದ್ದ ಸಂದರ್ಭ ಅಲ್ಲಿನ ಬೂತ್ ಒಂದರಲ್ಲಿ ನಡೆದ ಚುನಾವಣಾ ಅಕ್ರಮದ ವೇಳೆ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ಅದರಂತೆ ಮೂರ ಜನ ಅಧಿಕಾರಿಗಳನ್ನು ಅಮಾನತುಗೊಳಿಸುವ ಕಾರ್ಯ ನಡೆದಿತ್ತು. ಅದಾನಿಯವರೇ ಅಲ್ಲಿ ಚುನಾವಣೆ ನಡೆಸುತ್ತಿರುವ ಮಾತು ಕೇಳಿ ಬಂದಿತ್ತು. ಹಾಗಿದ್ದರೂ ಸೋಲನ್ನು ಒಪ್ಪಿಕೊಳ್ಳುವ ಜತೆಗೆ ದೇಶದ ಸಂವಿಧಾನ ವಿರದ್ದುವಾಗಿ ಕೆಲಸ ಮಾಡುವವರ ವಿರುದ್ಧ ಎಚ್ಚರಿಸುವ ಕೆಲಸವನ್ನು ಕಾಂಗ್ರೆಸ್ ಮುಂದುವರಿಸಲಿದೆ ಎಂದಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article