ಜವಾಹರಲಾಲ್ ನೆಹರೂರವರು ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು: ಕೆ. ಹರೀಶ್ ಕುಮಾರ್

ಜವಾಹರಲಾಲ್ ನೆಹರೂರವರು ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು: ಕೆ. ಹರೀಶ್ ಕುಮಾರ್


ಮಂಗಳೂರು: ಜವಾಹರಲಾಲ್ ನೆಹರೂರವರು ಕೃಷಿ, ನೀರಾವರಿ, ವಿಜ್ಞಾನ-ತಂತ್ರಜ್ಞಾನ, ಕೈಗಾರಿಕೆ ಯೋಜನೆಗಳನ್ನು ಜಾರಿಗೆ ತಂದು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಧಿವೃದ್ಧಿಗೊಳಿಸಿ ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದರು. 

ಮಾಜಿ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂರವರ 135ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ನಗರದ ನೆಹರೂ ಮೈದಾನದಲ್ಲಿರುವ ನೆಹರೂ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡುತ್ತಿದ್ದರು.

ದೇಶಕ್ಕೆ ಸ್ವಾತಂತ್ರ್ಯ ಲಭಿಸಿದಾಗ ಅನಕ್ಷರತೆ, ಬಡತನ, ನಿರುದ್ಯೋಗ ವ್ಯಾಪಕವಾಗಿತ್ತು. ನೆಹರೂ ಅವರು ಈ ಎಲ್ಲಕ್ಕೂ ಪೂರಕವಾಗಿ ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತಂದು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಲು ಜೀವನದುದ್ದಕ್ಕೂ ಶ್ರಮಿಸಿದರು. ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಡಿ ದೇಶದ ಅಭಿವೃದ್ಧಿ ಮಾಡಲು ಮುಂದಾದರು. ಅವರ ದೂರದೃಷ್ಟಿ ಯೋಜನೆಗಳಿಂದಲೇ ದೇಶದ ಎಲ್ಲ ರಾಜ್ಯಗಳು ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಯಿತು ಎಂದು ಸ್ಮರಿಸಿದರು.

ದೇಶವನ್ನು ವೈಜ್ಞಾನಿಕ, ಆಧುನಿಕತೆ ಆಧಾರದಲ್ಲಿ ನಿರ್ಮಿಸುತ್ತಾ ಭಾರತೀಯರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ನಿರಂತರ ಕಾರ್ಯಕ್ರಮಗಳನ್ನು ರೂಪಿಸಿದರು. ನೆಹರೂರವರು ದೇಶಕ್ಕೆ ಅನನ್ಯ ಕೊಡುಗೆ ನೀಡಿ ಸಾಮಾಜಿಕ ಕ್ರಾಂತಿಯ ಹರಿಕಾರರೆನಿಸಿದರು. ಆದರೆ ಇಂದು ಅವರ ಆಶೋತ್ತರಗಳನ್ನು ಮರೆಮಾಚುವ ಕೆಲಸ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಈ ಸಂದರ್ಭ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮೂಡಾ ಅಧ್ಯಕ್ಷ ಸದಾಶಿವ್ ಉಳ್ಳಾಲ್, ರಾಜ್ಯ ಗೇರು ನಿಮದ ಅಧ್ಯಕ್ಷೆ ಮಮತಾ ಗಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ. ಅಬ್ದುಲ್ ಸಲೀಂ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ನಝೀರ್ ಬಜಾಲ್, ಮುಖಂಡರಾದ ಪದ್ಮನಾಭ ಅಮೀನ್, ಸಂಶುದ್ದೀನ್ ಬಂದರ್, ಶುಭೋದಯ ಆಳ್ವ, ಸತೀಶ್ ಪೆಂಗಲ್, ಚೇತನ್ ಕುಮಾರ್, ಗಣೇಶ್ ಪೂಜಾರಿ, ನೆಲ್ಸನ್ ಮೊಂತೆರೊ,  ಚಂದ್ರಕಲಾ ಜೋಗಿ, ರೂಪಾ ಚೇತನ್, ಟಿ.ಕೆ. ಶೈಲಜಾ, ಮಂಜುಳಾ ನಾಯಕ್, ಶಾಂತಲ ಗಟ್ಟಿ, ವಸಂತಿ ಅಂಚನ್, ಮೋಹಿನಿ ಅಮೀನ್, ಸಬಿತಾ, ನೀನಾ, ಪ್ರಿಯಾ ಅಂದ್ರಾದೆ, ಸುನೀಲ್ ಬಜಿಲಕೇರಿ, ಯೋಗೀಶ್ ಕುಮಾರ್ ಕದ್ರಿ, ವಹಾಬ್ ಕುದ್ರೋಳಿ, ಸಲೀಂ ಪಾಂಡೇಶ್ವರ, ಜಿ.ಎ.ಜಲೀಲ್, ಆಲ್ವಿನ್ ಪ್ರಕಾಶ್, ರಮಾನಂದ ಪೂಜಾರಿ, ದಿನೇಶ್ ಪಾಂಡೇಶ್ವರ, ಸದಾಶಿವ ಕುಲಾಲ್ ಅತ್ತಾವರ, ಎ.ಆರ್.ಇಮ್ರಾನ್, ರವಿರಾಜ್ ಪೂಜಾರಿ, ಹೈದರ್ ಬೋಳಾರ್, ಸಮರ್ಥ್ ಭಟ್ ಉಪಸ್ಥಿತರಿದ್ದರು.

ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್ ಸ್ವಾಗತಿಸಿದರು. ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಜೋಕಿಂ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.







Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article