ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿ ಸಾವು

ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿ ಸಾವು


ಮಂಗಳೂರು: ನಗರದ ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಕಾರ್ಕಳ ನಿವಾಸಿ ರಂಜಿತಾ (28) ಮೃತಪಟ್ಟವರು. 

ರಂಜಿತಾ ಹೆರಿಗೆಗೆಂದು ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಕೆಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಲೇಡಿಗೋಷನ್‌ ಆಸ್ಪತ್ರೆಯಲ್ಲಿ ಅ.28ಕ್ಕೆ ದಾಖಲಾಗಿದ್ದರು. ಅ.30ಕ್ಕೆ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಹೆರಿಗೆಯಾಗಿತ್ತು. ಶಿಶುವನ್ನು ಎನ್ಐಸಿಯುನಲ್ಲಿ ದಾಖಲಿಸಲಾಗಿತ್ತು. ಆದರೆ ನ.3ಕ್ಕೆ ಶಿಶು ಮೃತಪಟ್ಟಿದೆ.

ಬಾಣಂತಿ ರಂಜಿತಾ ಗುಣಮುಖರಾಗಿದ್ದರಿಂದ ಸೋಮವಾರ ಡಿಸ್ಚಾರ್ಜ್‌ಗೆಂದು ವೈದ್ಯರು ಸೂಚಿಸಿದ್ದರು. ಮನೆಯವರು ಕೂಡ ಸಿದ್ದರಾಗಿ ಬಂದಿದ್ದರು. ಆದರೆ ರಂಜಿತಾ ಏಕಾಏಕಿ ನಾಲ್ಕನೇ ಮಹಡಿಯಿಂದ ಹಾರಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆಂದು ಆಸ್ಪತ್ರೆಯ ವೈದ್ಯಾಧಿಕಾರಿಯವರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article