ತಾಯಿ, ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ: ಡಾ. ಅಶ್ವಿನಿ

ತಾಯಿ, ಮಗುವಿನ ಆರೋಗ್ಯ ರಕ್ಷಣೆಗೆ ಮೊಬೈಲ್ ಕರೆ ಸಂದೇಶ: ಡಾ. ಅಶ್ವಿನಿ

ಮಂಗಳೂರು: ಕೇಂದ್ರ ಸರ್ಕಾರವು 4 ತಿಂಗಳು ಮೇಲ್ಪಟ್ಟ ಗರ್ಭಿಣಿ ಮಹಿಳೆಯ ಹಾಗೂ ಒಂದು ವರ್ಷದೊಳಗಿನ ಮಕ್ಕಳಿಗೆ ಕುಟುಂಬದ ಸದಸ್ಯರು ವಹಿಸಬೇಕಾದ ಕಾಳಜಿ, ಲಸಿಕೆ ಒದಗಿಸುವಿಕೆ ಹಾಗೂ ಇತರೆ ತಪಾಸಣೆ ಕೈಗೊಳ್ಳಲು ಸಹಾಯಕವಾಗುವ ದಿಶೆಯಲ್ಲಿ ದೇಶಾದ್ಯಂತ ಎಲ್ಲಾ ಭಾಷೆಗಳಲ್ಲಿ ವಿನೂತನ ಕಾರ್ಯಕ್ರಮ “ಕಿಲ್ಕಾರಿ” ಮೊಬೈಲ್ ಕರೆ ಆರಂಭಿಸಲಾಗಿದೆ ಎಂದು ರಾಜ್ಯ ಕಿಲ್ಕಾರಿ ಸಂಯೋಜಕಿ ಡಾ. ಅಶ್ವಿನಿ ತಿಳಿಸಿದ್ದಾರೆ.

 ಕಿಲ್ಕಾರಿಯು  ಗರ್ಭಿಣಿಯರು, ತಾಯಂದಿರು ಮತ್ತು ಅವರ ಕುಟುಂಬಗಳಿಗೆ ಸಂತಾನೋತ್ಪತ್ತಿ, ನವಜಾತ ಶಿಶುಗಳು ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಸಕಾಲಿಕ, ನಿಖರವಾದ ಮತ್ತು ಸಂಬಂಧಿತ ಮಾಹಿತಿಯನ್ನು ಒದಗಿಸುವ ಮೊಬೈಲ್ ಆರೋಗ್ಯ ಶಿಕ್ಷಣ ಸೇವೆಯಾಗಿದೆ. 

ಈ ಕಾರ್ಯಕ್ರಮವನ್ನು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಹಭಾಗಿತ್ವದಲ್ಲಿ ಕಾರ್ಯಗತಗೊಳಿಸಲಾಗಿದೆ, ಕುಟುಂಬಗಳ ಆರೋಗ್ಯ ಜ್ಞಾನವನ್ನು ಸುಧಾರಿಸಲು ಮತ್ತು ಜೀವ ಉಳಿಸುವ, ಆರೋಗ್ಯಕರ ಅಭ್ಯಾಸಗಳನ್ನು ತಿಳಿಸುವ ಗುರಿಯನ್ನು ಹೊಂದಿದೆ.

ತಾಯಿ ಮಕ್ಕಳ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಖಅಊ Poಡಿಣಚಿಟನಲ್ಲಿ ದಾಖಲಾಗಿರುವ ಗರ್ಭಿಣಿಯರಿಗೆ ಕುಟುಂಬಗಳ ಮೊಬೈಲ್ ಫೋನ್ ಗಳಿಗೆ ನೇರವಾಗಿ ಸಮಯ-ಸೂಕ್ಷ್ಮ ಆಡಿಯೊ ಮಾಹಿತಿಯನ್ನು ತಲುಪಿಸಲು ಕಿಲ್ಕಾರಿ ಪ್ರಸ್ತುತ ಇಂಟರಾಕ್ಟಿವ್ ವಾಯ್ಸ್ ರೆಸ್ಪಾನ್ಸ್ ತಂತ್ರಜ್ಞಾನವನ್ನು ಬಳಸಲಾಗಿದೆ. ಗರ್ಭಧಾರಣೆಯಾದ ಎರಡನೇ ತ್ರೈಮಾಸಿಕದಿಂದ ಮಗುವಿಗೆ ಒಂದು ವರ್ಷದವರೆಗೆ (72 ವಾರಗಳು) ತಾಯಿ ಮತ್ತು ಮಗುವಿನ ಸಾವುಗಳು ಸಂಭವಿಸುವುದನ್ನು ತಪ್ಪಿಸಲು ನಿರ್ಣಾಯಕ ಅವಧಿಯನ್ನು ಕರೆಗಳು ಒಳಗೊಳ್ಳುತ್ತವೆ.

ಜಿಲ್ಲೆಯಲ್ಲಿ  ಪ್ರತಿ ತಿಂಗಳ 9 ಮತು 24 ತಾರೀಖಿನಂದು ಎಲ್ಲಾ ಗರ್ಭಿಣಿಯರ ತಪಾಸಣೆಯನ್ನು ಮಾಡಲಾಗುತ್ತಿದ್ದು, ಎಲ್ಲಾ ಮಾಹಿತಿಯನ್ನು ಪೋನ್ ಮೂಲಕ ಪಾಲಕರಿಗೆ ಮಾಹಿತಿ ವಿನಿಮಯ ಮಾಡುವ ಮೂಲಕ ಮಗುವಿನ ಆರೋಗ್ಯದ ಕಾಳಜಿ ವಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಹೆಚ್.ಆರ್ ತಿಮ್ಮಯ್ಯ  ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article