
ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ
Tuesday, November 26, 2024
ಮಂಗಳೂರು: ನ.26 ರಂದು ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ ಮತ್ತು ರಾಜ್ಯಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಸಂವಿಧಾನ ಹಾಗೂ ಸಂವಿಧಾನ ದಿನದ ಮಹತ್ವದ ಬಗ್ಗೆ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಎಂ. ವಿವರಿಸಿದರು. ಸಂವಿಧಾನ ಕರ್ತೃ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಪುಷ್ಪಾರ್ಚನೆಯ ಮೂಲಕ ಗೌರವಾರ್ಪಣೆ ಸಲ್ಲಿಸಿದರು.
ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ಮುಖ್ಯಸ್ಥೆ ನಸೀಮಾ ಬೇಗಂ ಅವರು ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ನಿರ್ವಹಿಸಿದರು.
ಸುಮಾರು 500ಕ್ಕೂ ಹೆಚ್ಚು ಸ್ನಾತಕ-ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ 100ಕ್ಕೂ ಹೆಚ್ಚು ಬೋಧಕ-ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಐಕ್ಯೂಎಸಿಯ ಸಂಯೋಜಕ ದೇವಿ ಪ್ರಸಾದ್ ಹಾಗೂ ಸಹ-ಸಂಯೋಜಕಿ ಡಾ. ಜ್ಯೋತಿಪ್ರಿಯಾ ಉಪಸ್ಥಿತರಿದ್ದರು.