ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸ ಕೊಠಡಿ ಕಾರ್ಯರಂಭ

ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸ ಕೊಠಡಿ ಕಾರ್ಯರಂಭ


ಮಂಗಳೂರು: ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಬುಧವಾರದಿಂದ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ. 

ತಜ್ಞ ವೈದ್ಯ ಡಾ ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯರಂಭಕ್ಕೆ ಸಹಕಾರ ಮಾಡಿದ್ದಾರೆ. ಮೊದಲ ದಿವಸ ಡಾ ಸುರೇಶ ಪೈ ತಂಡದವರಿಂದ ಥೋರಾಸಿಕ್ ಸರ್ಜರಿ ಮಾಡಲಾಯಿತು. ಡಾ ಹೇಮಲತಾ ಹಾಗೂ ಡಾ ವಿಶ್ವವಿಜೇತ ತಂಡವು ಐದು ಜನರ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದರು. ಡಾ ಅರ್ಜುನ್ ಶೆಟ್ಟಿ ತಂಡವು ಮೆದುಳಲ್ಲಿ ರಕ್ತ ಹೆಪ್ಪು ಗಟ್ಟಿದ ರೋಗಿಗೆ ತುರ್ತು ಶಸ್ತ್ರ ಚಿಕಿತ್ಸೆ ಮಾಡಿದರು. ಡಾ ಸುರೇಶ ಭಟ್ ಅರವಳಿಕೆ ತಂಡದ ಮುಖ್ಯಸ್ಥರಾಗಿದ್ದು ಎಲ್ಲಾ ಶಸ್ತ್ರ ಚಿಕಿತ್ಸೆ ಯಾವುದೇ ತೊಂದರೆ ಆಗದ ಹಾಗೆ ನೆರವೇರಿಸಿದರು.

ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ನಸಿರ್ಂಗ್ ಅಧಿಕಾರಿಗಳಾದ ಶೈಲಾ, ಜೇಸಿಂತ, ಅಶ್ವಿನಿ, ರೇಷ್ಮಾ, ಅಲ್ವನ ಮೆನೇಜ್ಸ್ ಇದ್ದರು. ಓಟಿ ಟೆಕ್ನಿಷಿಯನ್ಗಳಾದ ಧನು, ಶ್ರದ್ದಾ, ಹೇಮಾಶ್ರೀ, ಅರ್ಪಿತಾ, ಪ್ರದೀಪ್ ಹಾಗೂ ಡಿ ಗ್ರೂಪ್ ನೌಕರರಾದ ಜಯಪ್ರಕಾಶ್ ಮತ್ತು ಹರೀಶ್ ಉಪಸ್ಥಿತರಿದ್ದರು.

ಡಿಸೆಂಬರ್ 1ರಿಂದ ಶಸ್ತ್ರ ಚಿಕಿತ್ಸಾ ಹಾಗೂ ಮೂಳೆ ವಿಭಾಗದ ಶಸ್ತ್ರ ಚಿಕಿತ್ಸಾ ಕೊಠಡಿ ಪ್ರಾರಂಭವಾಗಲಿದ್ದು, ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.

ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ಶಸ್ತ್ರಚಿಕಿತ್ಸಾ ಕೊಠಡಿಗಳು ಹಾಗೂ ವಾರ್ಡ್ಗಳು ಈ ಭಾಗದ ಬಡವರಿಗೆ ವರದಾನ ಆಗಲಿದೆ ಎಂದು ವೆನ್ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article