ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಂಗಳೂರು-ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಂಗಳೂರು-ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ


ಮಂಗಳೂರು: ಕಸ್ತೂರಿ ರಂಗನ್ ವರದಿ ವಿರುದ್ದ ಶಿರಾಡಿ ಗ್ರಾಮದ ಗುಂಡ್ಯದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನಾ ಸಭೆ ನಡೆಯತು. ಈ ವೇಳೆ ಮನವಿ ಸ್ವೀಕರಿಸಲು ಪುತ್ತೂರು ಸಹಾಯಕ ಆಯುಕ್ತರು ಆಗಮಿಸಬೇಕೆಂದು ಪಟ್ಟು ಹಿಡಿದ ಪ್ರತಿಭಟನಾಕಾರರು ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ರೈತರೆಂದರೆ ಹೆಬ್ಬೆಟ್ಟಲ್ಲ ನೆನಪಿರಲಿ, ವಿವಿಧ ಕ್ಷೇತ್ರಗಳಲ್ಲಿ ವಿದ್ಯಾಭ್ಯಾಸ ಪಡೆದ ವಿದ್ಯಾವಂತರು ಇದ್ದಾರೆ. ನಾವು ಪ್ರತಿಭಟನೆಗೆ ಮಾನಸಿಕವಾಗಿ ಸಿದ್ದರಾಗಿಯೇ ಬಂದಿದ್ದೇವೆ, ಯಾವುದೇ ಕೇಸಿಗೆ ನಾವು ಹೆದರುವುದಿಲ್ಲ. ಇಲ್ಲಿನ ಭ್ರಷ್ಟ ಅಧಿಕಾರಿಗಳಿಗೆ ಮನವಿ ಕೊಡುವುದಿಲ್ಲ, ಅಕ್ರಮ-ಸಕ್ರಮಕ್ಕೆ ಹಣ ಪಡೆದ ಬಗ್ಗೆ ವೀಡಿಯೋ ಸಹಿತ ಸಾಕ್ಷಿ ಇದೆ, ಕಂದಾಯ ಇಲಾಖೆಯವರು ಅಕ್ರಮ ಮಾಡಿರುವುದಕ್ಕೆ ದಾಖಲೆ ಇದೆ. ಕಂದಾಯ ಮತ್ತು ಅರಣ್ಯ ಇಲಾಖೆಯ ವಿರುದ್ಧವೂ ಹೋರಾಟ ಮಾಡಲಾಗುವುದು ಎಂದರು. 

ನಮ್ಮ ಬೇಡಿಕೆಯನ್ನು ಪರಿಗಣಿಸದಿದ್ದಲ್ಲಿ ಅಗತ್ಯ ಬಂದರೆ ಬೆಂಗಳೂರು ಚಲೋ ಗೆ ಸಿದ್ದರಿದ್ದೇವೆ ಎಂದ ಕಿಶೋರ್ ಶಿರಾಡಿ. ಕೇಂದ್ರ ಮತ್ತು ರಾಜ್ಯ ಸರ್ಕಾರದ ನಾಯಕರು ಮುಂದೆ ನಿಂತು ಈ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು. 

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಭೆಯನ್ನು ಉದ್ಘಾಟಿಸಿದರು. ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಸಂಜೀವ ಮಠಂದೂರು, ಧರ್ಮಗುರುಗಳಾದ ರೆ.ಫಾ.ಆದರ್ಶ ಜೋಸೆಫ್, ರೆ.ಫಾ.ಸಿಬಿ, ಜಿಪಂ ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಪಿ.ಪಿ. ವರ್ಗೀಸ್, ಸರ್ವೋತ್ತಮ ಗೌಡ, ಆಶಾ ತಿಮ್ಮಪ್ಪ ಗೌಡ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಪ್ರಮುಖರಾದ ಎ.ವಿ. ತೀರ್ಥರಾಮ, ವೆಂಕಪ್ಪ ಗೌಡ ಸುಳ್ಯ, ವೆಂಕಟ್ ವಳಲಂಬೆ, ಸುಧೀರ್ ಕುಮಾರ್ ಶೆಟ್ಟಿ, ಮುಹಮ್ಮದ್ ಅಲಿ ಹೊಸಮಠ ಮತ್ತಿತರರು ವೇದಿಕೆಯಲ್ಲಿದ್ದರು. 

ಸಯ್ಯದ್ ಮೀರಾ ಸಾಹೇಬ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ಕಸ್ತೂರಿ ರಂಗನ್ ವರದಿ ಬಾಧಿತ ಗ್ರಾಮಗಳ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article