ಬಾಲಕಿಯ ಅತ್ಯಾಚಾರ: ಅಪರಾಧಿಗಳಿಗೆ ಮರಣದಂಡನೆ

ಬಾಲಕಿಯ ಅತ್ಯಾಚಾರ: ಅಪರಾಧಿಗಳಿಗೆ ಮರಣದಂಡನೆ


ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳಾಯಿಬೆಟ್ಟು ಪರಾರಿ ಎಂಬಲ್ಲಿನ ರಾಜ್‌ಟೈಲ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜಿಲ್ಲಾ ಸತ್ರ ತ್ವರಿತಗತಿ-2 ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿದೆ.

ಅತ್ಯಾಚಾರ, ಕೊಲೆ ಸಹಿತ ಪೋಕ್ಸೊ ಪ್ರಕರಣದ ಆರೋಪಿಗಳಾದ ಮಧ್ಯಪ್ರದೇಶದ ಜಯಸಿಂಗ್, ಮುಕೇಶ್ ಸಿಂಗ್, ಜಾರ್ಖಂಡ್‌ನ ಮನೀಶ್ ತಿರ್ಕಿ ಎಂಬವರಿಗೆ ಮರಣ ದಂಡನೆ, 1.20 ಲಕ್ಷ ರೂ. ದಂಡ ವಿಧಿಸಿದೆ. ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡುವಂತೆ ನ್ಯಾಯಾದೀಶ ಮಾನು ಕೆ.ಎಸ್. ಆದೇಶಿಸಿದ್ದಾರೆ.

2021ರ ನವೆಂಬರ್ 20ರಂದು ನಡೆದ ಈ ಪೋಕ್ಸೊ ಕೃತ್ಯದಲ್ಲಿ ಮರಣ ದಂಡನೆ ಶಿಕ್ಷೆಗೊಳಗಾದ ಪ್ರಥಮ ಪ್ರಕರಣ ಇದಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜ ನಡೆಸಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article