
ಎಸ್.ಜೆ.ಇ.ಸಿ ಮಹಿಳಾ ಬಾಸ್ಕೆಟ್‌ಬಾಲ್ ತಂಡ ರನ್ನರ್ಸ್ ಅಪ್ ಟ್ರೋಫಿ
Monday, November 11, 2024
ಮಂಗಳೂರು: ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ (ಎಸ್.ಜೆ.ಇ.ಸಿ) ಮಹಿಳಾ ಬಾಸ್ಕೆಟ್‌ಬಾಲ್ ತಂಡ ನ.5 ರಂದು ಹಳಿಯಾಳದ ಕೆ.ಎಲ್.ಎಸ್. ವಿಡಿಐಟಿಯಲ್ಲಿ ನಡೆದ ವಿಟಿಯು ಮಂಗಳೂರು ವಿಭಾಗದ ಮಹಿಳಾ ವಾಲಿಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ರನ್ನರ್ಸ್ ಅಪ್ ಟ್ರೋಫಿಯನ್ನು ಪಡೆದುಕೊಂಡಿದೆ.
ಇವರುಗಳಿಗೆ ದೈಹಿಕ ಶಿಕ್ಷಣ ನಿರ್ದೇಶಕಿ ವನೀಷಾ ವಿ. ರೋಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಎಂ. ಅವರು ಮಾರ್ಗದರ್ಶನ ನೀಡಿದ್ದಾರೆ.
ಈ ಸಾಧನೆಗೆ ಇಡೀ ತಂಡ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರನ್ನು ಎಸ್.ಜೆ.ಇ.ಸಿಯ ಆಡಳಿತ ಮಂಡಳಿಯು ಅಭಿನಂದಿಸಿದೆ.