
ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆಗೆ ಚಾಲನೆ
Friday, November 1, 2024
ಮಂಗಳೂರು: ಮಂಗಳೂರು ನಗರ ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಸಾರಥ್ಯದಲ್ಲಿ, ಕರಾವಳಿ ಸೇವಾ ಪ್ರತಿಷ್ಠಾನ (ರಿ) ಮಂಗಳೂರು ವತಿಯಿಂದ ನಡೆಯುತ್ತಿರುವ ದೀಪಾವಳಿ ಸಂಭ್ರಮ 2024 ರ ಭಾಗವಾದ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ ಹಾಗೂ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಸಹಕಾರ್ಯವಾಹರಾದ ಪಿ.ಎಸ್. ಪ್ರಕಾಶ್ ಅವರು ಚಾಲನೆ ನೀಡಿದರು.
ಹಿಂದೂ ಸಮಾಜದ ಒಗ್ಗಟ್ಟಿನ ಮಂತ್ರವಾದ ಭಜನೆಯಿಂದ ವಿಭಜನೆ ಇಲ್ಲ ಎಂಬ ಸಂದೇಶವನ್ನು ಪಿ.ಎಸ್ ಪ್ರಕಾಶ್ ಅವರು ಈ ಸಂದರ್ಭ ನೀಡಿದರು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಭಾ.ಜ.ಪ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಕರಾವಳಿ ಸೇವಾ ಪ್ರತಿಷ್ಠಾನ (ರಿ) ಮಂಗಳೂರು ಇದರ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ಹಾಗೂ ಅನೇಕ ಗಣ್ಯರು, ಪ್ರತಿಷ್ಠಾನದ ಸರ್ವ ಸದಸ್ಯರು ಉಪಸ್ಥಿತರಿದ್ದರು.