
ಅಡಿಕೆ ಬೆಳೆಗಾರರ ಸಮಸ್ಯೆ: ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಭೇಟಿಯಾದ ಕರಾವಳಿ ಸಂಸದರು
Wednesday, November 27, 2024
ಮಂಗಳೂರು: ನವ ದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಚೌಹಾಣ್ ಭೇಟಿಯಾಗಿ ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕರಾವಳಿಯ ಸಂಸದರು ಮನವಿ ಮಾಡಿದರು.
ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಡಿಸೆಂಬರ್ 6 ರಂದು ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ಬರುವುದಾಗಿ ಕೇಂದ್ರ ಸಚಿವರು ತಿಳಿಸಿ ಅಡಿಕೆ ಬೆಳೆಗಾರರ ನೆರವಿಗೆ ಬರಲು ಕೇಂದ್ರ ಸರಕಾರ ಭದ್ಧವಾಗಿದೆ ಎಂದರು ಎಂದು ಸಂಸದರು ತಿಳಿಸಿದ್ದಾರೆ.
ಶಿವಮೊಗ್ಗ ಸಂಸದ ರಾಘವೇಂದ್ರ, ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ, ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ, ಬ್ರಿಜೇಶ್ ಚೌಟ ಹಿರಿಯರಾದ ಹೊಸ ಬಾಲೆ ಮಂಜಪ್ಪ ಮತ್ತಿತರರು ಉಪಸ್ಥಿತರಿದ್ದರು.