
ಎಡನೀರು ಶ್ರೀಗಳ ವಾಹನಕ್ಕೆ ಅಡ್ಡಿ: ವಿಶ್ವ ಹಿಂದೂ ಪರಿಷದ್ ಖಂಡನೆ
Tuesday, November 5, 2024
ಮಂಗಳೂರು: ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಸಂಚರಿಸುತಿದ್ದ ವಾಹನಕ್ಕೆ ಕಿಡಿಗೇಡಿಗಳು ತಡೆಯೊಡ್ಡಿ ಕೃತ್ಯ ಎಸಗಿದ ಘಟನೆಯನ್ನು ವಿಶ್ವ ಹಿಂದೂ ಪರಿಷದ್ ಬಲವಾಗಿ ಖಂಡಿಸುತ್ತದೆ.
ಪೂಜ್ಯ ಸಾಧು ಸಂತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಕೇರಳ ಸರಕಾರಕ್ಕೆ ಆಗ್ರಹಿಸಿದ್ದಾರೆ.