ಸೈಬರ್ ವಂಚನೆ: ಮೂವರ ಬಂಧನ

ಸೈಬರ್ ವಂಚನೆ: ಮೂವರ ಬಂಧನ


ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಸೈಬರ್ ಅಪರಾಧ ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಿಬಿಐ ಅಧಿಕಾರಿ ಎಂದು ಹೆದರಿಸಿ ಸುಮಾರು 68 ಲಕ್ಷ ರೂ. ಹಣವನ್ನು ಸುಲಿಗೆ ಮಾಡಿದ್ದ ಆರೋಪಿ ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ತಾಲೂಕಿನ ನಿಸಾರ್ ಎಂಬಾತನನ್ನು ಬಂಧಿಸಲಾಗಿದೆ. 

ಅದಲ್ಲದೆ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಅಧಿಕ ಲಾಭಾಂಶ ಕೊಡುವುದಾಗಿ ನಂಬಿಸಿ ಸುಮಾರು 90 ಲಕ್ಷ ರೂ. ಹಣವನ್ನು ವಂಚನೆ ಮಾಡಿರುವ ಆರೋಪಿಗಳಾದ ಕೇರಳದ ಕೋಝಿಕೋಡ್ನ ಸಾಹಿಲ್ ಕೆ. ಪಿ ಮತ್ತು ನಶಾತ್ ಆರ್. ಎಂಬವರನ್ನು ಬಂಧಿಸಲಾಗಿದೆ. 

ಕಾರ್ಯಾಚರಣೆಯಲ್ಲಿ ಇನ್ಸ್‌ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ ಸಿಬ್ಬಂದಿಗಳಾದ ರಾಮಣ್ಣ ಶೆಟ್ಟಿ, ಭುವನೇಶ್ವರಿ, ರಾಜಪ್ಪಕಾಶಿಬಾಯಿ, ಪ್ರವೀಣ್ ಎನ್., ಮಾಲತೇಶ ಪಾಲ್ಗೊಂಡಿದ್ದರು

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article