.jpeg)
ಬಿಜೆಪಿಯವರ ಪತ್ರ ಇರಬಹುದು: ಡಾ. ಜಿ. ಪರಮೇಶ್ವರ್
Saturday, November 30, 2024
ಮಂಗಳೂರು: ಹಾಸನದಲ್ಲಿ ಕಾಂಗ್ರೆಸ್ ನಡೆಸುವ ಸ್ವಾಭಿಮಾನ ಸಮಾವೇಶಕ್ಕೆ ಅಸಮಾಧಾನದ ಅನಾಮಧೇಯ ಪತ್ರದ ಕುರಿತಂತೆ ಮಾತನಾಡಿದ ಡಾ.ಪರಮೇಶ್ವರ್, ಸಮಾವೇಶಕ್ಕೆ ಯಾರ ಅಸಮಾಧಾನವೂ ಇಲ್ಲ. ಅನಾಮಧೇಯ ಪತ್ರವನ್ನು ಬಿಜೆಪಿಯವರು ಯಾಕೆ ಬರೆಯಬಾರದು, ಅವರೇ ಅನಾಮಧೇಯ ಪತ್ರಗಳನ್ನು ಬರೆಯುತ್ತಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಆರೋಪಿಸಿದರು.
ಅದು ನಮಗೆ ಲೆಕ್ಕ ಇಲ್ಲ, ನಮ್ಮಲ್ಲಿ ಯಾವುದೇ ಅಪಸ್ವರ ಇಲ್ಲ. ನಾನು ತುಮಕೂರಿನಲ್ಲಿ ಸಮಾವೇಶ ಮಾಡಲು ಹೊರಟಿದ್ದೆ. ಆದರೆ ನಮಗೆ ಬೇರೆ ಕಾರ್ಯಕ್ರಮ ಕೊಟ್ಟಿದ್ದಾರೆ. ಹಾಸನದಲ್ಲಿ ಪಕ್ಷದಿಂದಲೇ ಸ್ವಾಭಿಮಾನಿ ಸಮಾವೇಶ ಮಾಡುತ್ತಿದ್ದೇವೆ. ಬೇರೆ ಬೇರೆ ಜನರು ನಮಗೆ ಸಹಕಾರ ನೀಡುತ್ತಿದ್ದಾರೆ ಎಂದು ಡಾ.ಪರಮೇಶ್ವರ್ ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ, ಸಂಪುಟ ಪುನರ್ ರಚನೆ ಕುರಿತಂತೆ ಮಾತನಾಡಿದ ಡಾ. ಪರಮೇಶ್ವರ್, ಇವೆರಡು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದರು.