ಕಾಂಗ್ರೆಸ್ ಹಿರಿಯ ಮುಖಂಡ ಅಜಿತ್ ಕುಮಾರ್ ನಿಧನಕ್ಕೆ ಸಂತಾಪ

ಕಾಂಗ್ರೆಸ್ ಹಿರಿಯ ಮುಖಂಡ ಅಜಿತ್ ಕುಮಾರ್ ನಿಧನಕ್ಕೆ ಸಂತಾಪ


ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಮೇಯರ್ ಅಜಿತ್ ಕುಮಾರ್ (73) ಅವರ ನಿಧನಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ.

ಮಂಗಳೂರಿನ ಯೆಯ್ಯಾಡಿ ನಿವಾಸಿ, ಸಿವಿಲ್ ಎಂಜಿನಿಯರ್ ಆಗಿದ್ದ ಅಜಿತ್ ಕುಮಾರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತರಾಗಿದ್ದರು. ಜಿಲ್ಲೆಯಲ್ಲಿ ನಡೆದ ಹಲವಾರು ಚುನಾವಣೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಕಾಂಗ್ರೆಸ್ ಮುಖಂಡರ ಜೊತೆ ಕರ್ತವ್ಯ ನಿರ್ವಹಿಸಿದ್ದರು. 1987-88ನೇ ಸಾಲಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕೂಡ ಆಗಿದ್ದರು. 

ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ, ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ರಾಜ್ಯಸಭಾ ಸದಸ್ಯ ಬಿ. ಇಬ್ರಾಹೀಂ, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಗಂಗಾಧರ್ ಗೌಡ, ಶಾಸಕರಾದ ಅಶೋಕ್ ಕುಮಾರ್ ರೈ, ಐವನ್ ಡಿ’ಸೋಜಾ, ಮಾಜಿ ಶಾಸಕರಾದ ವಿಜಯ ಕುಮಾರ್ ಶೆಟ್ಟಿ, ಎನ್.ಎಂ. ಅಡ್ಯಂತಾಯ, ಮೊಹಮ್ಮದ್ ಮಸೂದ್, ಶಕುಂತಲಾ ಶೆಟ್ಟಿ, ಜೆ.ಆರ್. ಲೋಬೊ, ಎಐಸಿಸಿ ಕಾರ್ಯದರ್ಶಿ ವಿ.ಪಿ. ಮೋಹನ್, ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪದಾಧಿಕಾರಿಗಳಾದ ಎಂ.ಎಸ್. ಮೊಹಮ್ಮದ್, ಜಿ.ಎ. ಬಾವಾ, ಮಿಥುನ್ ರೈ, ರಕ್ಷಿತ್ ಶಿವರಾಂ, ಜಿ. ಕೃಷ್ಣಪ್ಪ, ಇನಾಯತ್ ಅಲಿ, ಟಿ.ಎಂ.ಶಹೀದ್, ಲಾವಣ್ಯ ಬಳ್ಳಾಲ್, ಮುಖಂಡರಾದ ಬಿ.ಎಚ್. ಖಾದರ್, ಶಶಿಧರ್ ಹೆಗ್ಡೆ, ಯು.ಕೆ. ಮೋನು, ಸುರೇಶ್ ಬಳ್ಳಾಲ್, ಇಬ್ರಾಹೀಂ ಕೋಡಿಜಾಲ್, ಸದಾಶಿವ್ ಉಳ್ಳಾಲ್, ಕೆ. ಅಶ್ರಫ್, ಮಹಾಬಲ ಮಾರ್ಲ, ಮಮತಾ ಗಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಸಲೀಂ, ಪ್ರಕಾಶ್ ಸಾಲ್ಯಾನ್, ಮ.ನ.ಪಾ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಲ್ಯಾನ್ಸ್ ಲೋಟೊ ಪಿಂಟೊ, ಭಾಸ್ಕರ್.ಕೆ, ಅಬ್ದುಲ್ ರವೂಫ್, ಕೇಶವ ಮರೋಳಿ, ನವೀನ್ ಡಿಸೋಜ, ಎ.ಸಿ. ವಿನಯರಾಜ್, ಜೆಸಿಂತಾ, ಸಂಶುದ್ದೀನ್ ಕುದ್ರೋಳಿ, ಲತೀಫ್ ಕಂದಕ್, ಅಶ್ರಫ್ ಬಜಾಲ್, ಅನೀಲ್ ಕುಮಾರ್, ಝೀನತ್ ಸಂಶುದ್ದೀನ್ ಬಂದರ್, ಸತೀಶ್ ಪೆಂಗಲ್, ಹೇಮಂತ್ ಗರೋಡಿ, ಚೇತನ್ ಕುಮಾರ್, ತನ್ವೀರ್ ಶಾ, ಕಿಶೋರ್ ಶೆಟ್ಟಿ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಸಂಪಾತ ಸೂಚಿಸಿದ್ದಾರೆ.

ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು ನ.4 ರಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article