ಪರಿಣಾಮಕಾರಿ ಸಾರ್ವಜನಿಕ ಸಂಬಂಧ: ಶ್ರೀಪಾದ್ ಯೆಸ್ಸೊನಾಯಕ್

ಪರಿಣಾಮಕಾರಿ ಸಾರ್ವಜನಿಕ ಸಂಬಂಧ: ಶ್ರೀಪಾದ್ ಯೆಸ್ಸೊನಾಯಕ್


ಮಂಗಳೂರು: ದೇಶದ ಅಭಿವೃದ್ಧಿಗೆ ಪರಸ್ಪರ ಸಹಕಾರ, ಪರಿಣಾಮಕಾರಿ ಸಾರ್ವಜನಿಕ ಸಂಬಂಧದ ಅಗತ್ಯವಿದೆ ಎಂದು ವಿದ್ಯುತ್ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೊನಾಯಕ್ ತಿಳಿಸಿದ್ದಾರೆ.

ಅವರು ಶುಕ್ರವಾರ ಸಂಜೆ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಅಖಿಲ ಭಾರತ ಸಾರ್ವಜನಿಕ ಸಂಪರ್ಕ ಮಂಡಳಿ (ಪಿಆರ್‌ಸಿಐ) ಮಂಗಳೂರಲ್ಲಿ ಆಯೋಜಿಸಿದ ಎರಡು ದಿನಗಳ 18ನೇ ಗ್ಲೋಬಲ್ ಕಮ್ಯುನಿಕೇಶನ್ ಕಾನ್‌ಕ್ಲೇವ್‌ನಲ್ಲಿ ಸಾಧಕರ ಸನ್ಮಾನ ಮತ್ತು ಪ್ರಶಸ್ತಿ ವಿತರಣಾ ಸಮಾ ರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಇಂದಿನ ಡಿಜಿಟಲ್ ಯುಗದಲ್ಲಿ ಜಾಗತಿಕ ಸಂಬಂಧಗಳನ್ನು ಉತ್ತಮ ಗೊಳಿಸಲು ಅಪನಂಬಿಕೆಗಳನ್ನು ದೂರಗೊಳಿಸಲು ಉತ್ತಮ ಸಾರ್ವಜನಿಕ ಸಂಪರ್ಕ ಅಗತ್ಯವಿದೆ. ಆದ್ದರಿಂದ ಸಾರ್ವಜನಿಕ ಸಂಪರ್ಕವನ್ನು ಪುನರ್ ಸ್ಥಾಪಿಸುವ ಜೊತೆಗೆ ಡಿಜಿಟಲ್ ಸಂಪರ್ಕ ವ್ಯವಸ್ಥೆ ಯನ್ನು ಇನ್ನಷ್ಟು ಗಟ್ಟಿಗೊಳಿಸಬೇಕಾಗಿದೆ. ಉತ್ತಮ ಸಂಪರ್ಕ, ಸಂವಹನದಿಂದ ಸಮಾಜದಲ್ಲಿ ಉತ್ತಮ ಬಾಂಧವ್ಯವನ್ನು ಹೊಂದಲು ಸಾಧ್ಯ ಎಂದು ಸಚಿವರು ಸಮ್ಮೇಳನಕ್ಕೆ ಶುಭ ಹಾರೈಸಿದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಮತ್ತು ಪಿಆರ್ ಸಿಐ ಪ್ರಶಸ್ತಿ ವಿತರಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article