
ಗುಣಮಟ್ಟದ ಶಿಕ್ಷಣಕ್ಕೆ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆ ಹೆಸರುವಾಸಿ: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ಗುಣಮಟ್ಟದ ಶಿಕ್ಷಣಕ್ಕೆ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆ ಹೆಸರುವಾಸಿಯಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.
ವಳಚ್ಚಿಲ್ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ನೂತನ ಸಿಬ್ಬಂದಿ ವಸತಿ ಸಂಕೀರ್ಣ-‘ಓಮೆಗಾ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವ್ಯಕ್ತಿತ್ವ ವಿಕಾಸ, ಪ್ರಶ್ನಿಸುವ ಮನೋಭಾವ, ವಿವೇಚನೆ, ಬುದ್ಧಿವಂತಿಕೆ ಮತ್ತು ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ಗುಣಗಳು ಒಳ್ಳೆಯ ಶಿಕ್ಷಣ ಸಂಸ್ಥೆಯಿಂದ ಮಾತ್ರ ಸಾಧ್ಯ. ಇಂಥ ಕೆಲಸವನ್ನು ಎಕ್ಸ್‌ಪರ್ಟ್ ಕಾಲೇಜು ಮಾಡುತ್ತಿದೆ ಎಂದರು.
ಮುಖ್ಯ ಅತಿಥಿ ಶಾಸಕ ಭರತ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸೂಕ್ತ ರೀತಿಯಲ್ಲಿ ಮಾರ್ಗದರ್ಶನ ಮಾಡುವ ಮೂಲಕ ಯೋಗ್ಯ ಪ್ರಜೆಯನ್ನಾಗಿ ರೂಪಿಸಬಹುದು. ವಿಶ್ವದರ್ಜೆಯಗುಣಮಟ್ಟದ ಸೌಲಭ್ಯಗಳನ್ನು ಹೊಂದಿರುವಎಕ್ಸ್‌ಪರ್ಟ್‌ರಾಜ್ಯದಾದ್ಯಂತ ವಿದ್ಯಾರ್ಥಿಗಳನ್ನು ಸೆಳೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ನರೇಂದ್ರ ಎಲ್.ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಡಾ. ಉಷಾಪ್ರಭಾಎನ್.ನಾಯಕ್, ಮಾಹಿತಿ ತಂತ್ರಜ್ಞಾನ ನಿರ್ದೇಶಕ ಅಂಕುಶ್‌ಎನ್. ನಾಯಕ್, ವಾಸ್ತು ತಜ್ಞೆ ದೀಪಿಕಾ ಎ. ನಾಯಕ್, ಟ್ರಸ್ಟಿ ಉಸ್ತಾದ್ ರಫೀಕ್ ಖಾನ್, ಪ್ರಾಂಶುಪಾಲ ಡಾ. ಎನ್.ಕೆ. ವಿಜಯನ್, ಉಪ ಪ್ರಾಂಶುಪಾಲ(ಶೈಕ್ಷಣಿಕ) ಸುಬ್ರಹ್ಮಣ್ಯ ಉಡುಪ ಉಪಸ್ಥಿತರಿದ್ದರು.
ರಸಾಯನ ಶಾಸ್ತ್ರ ವಿಭಾಗದವ ಉಪನ್ಯಾಸಕಿ ಧೃತಿ ವಿ. ಹೆಗ್ಡೆ ಸ್ವಾಗತಿಸಿ, ವಂದಿಸಿದರು.