‘ಮಂಗಳೂರು ಪಾರಂಪರಿಕ ಉತ್ಸವ’ಕ್ಕೆ ಚಾಲನೆ

‘ಮಂಗಳೂರು ಪಾರಂಪರಿಕ ಉತ್ಸವ’ಕ್ಕೆ ಚಾಲನೆ


ಮಂಗಳೂರು: ಟಿಪ್ಪು ಮರಣದ ನಂತರ 1799ರ ಜುಲೈ 8 ರಂದು ಮೇಜರ್ ಸರ್ ಥೋಮಸ್ ಮುನ್ರೋ ಪ್ರಥಮ ಜಿಲ್ಲಾ ಕಲೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಲು ಆರಂಭಿಸಿದ ಮಂಗಳೂರು ಸ್ಟೇಟ್‌ಬ್ಯಾಂಕ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಹಳೆ ಕಟ್ಟಡದಲ್ಲಿ ಎರಡು ದಿನಗಳ ‘ಮಂಗಳೂರು ಪಾರಂಪರಿಕ ಉತ್ಸವ’ಕ್ಕೆ ಶನಿವಾರ ಬೆಳಗ್ಗೆ ಚಾಲನೆ ನೀಡಲಾಯಿತು.

ಉದ್ಘಾಟಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪಾರಂಪರಿಕ ಹಿನ್ನೆಲೆ ಹೊಂದಿರುವ 125 ವರ್ಷ, ಹಳೆಯದಾದ ಜಿಲ್ಲಾಧಿಕಾರಿ ಕಚೇರಿಯ ಈ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಚೇರಿಗಳು ಸ್ಥಳಾಂತರಗೊಂಡಿದೆ. ಇದು ಒಂದು ಶ್ರೀಮಂತ ಇತಿಹಾಸಕ್ಕೆ ಸಾಕ್ಷಿಯಾಗಿರುವ ಈ ಹಳೆ ಕಟ್ಟಡವನ್ನು ಸಂರಕ್ಷಿಸುವ ಹಾಗೂ ಈ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಕರಾವಳಿಯ ಕಸುಬು, ಕಲೆ, ಬದುಕನ್ನು ಬಿಂಬಿಸುವ ಕಲಾಕೃತಿಗಳ ಪ್ರದರ್ಶನ, ಸಂಗೀತ ಸಂಜೆ, ಗುಂಪು ಚರ್ಚೆ, ಶಾಲಾ ವಿದ್ಯಾರ್ಥಿಗಳಿಗೆ ಚಿತ್ರ ರಚನೆ ಸ್ಪರ್ಧೆ ಕಾರ್ಯಕ್ರಮದ ಮುಖ್ಯ

ಆಕರ್ಷಣೆಯಾಗಿದೆ. ಶ್ರೀನಿವಾಸ್ ಸ್ಕೂಲ್ ಆಫ್ ಆರ್ಕಿಟೆಕ್ಚರ್, ಚಾವಡಿ, ಬಾಸೆಲ್ ಮಿಷನ್, ಆರ್ಟ್ ಕೆನರಾ, ಕಲ್ಲಡ್ಕ ಮ್ಯೂಸಿಯಂ, ಕೆನರಾಚೇಂಬರ್ ಮುಂತಾದ ಸಂಸ್ಥೆಗಳು ಕಾರ್ಯಕ್ರಮಕ್ಕೆ ಸಹಯೋಗ ನೀಡಿವೆ.

ಡಿಸೆಂಬರ್ 1 ರಂದು ಸಂಜೆ 6 ಗಂಟೆ ತನಕ ವಸ್ತುಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿದೆ. ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಚಿತ್ರಸ್ಪರ್ಧೆಯಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ೨೫೦

ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.

ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಮಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಾಜು ಕೆ., ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ರಶ್ಮಿ ಉಪಸ್ಥಿತರಿದ್ದರು.





Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article