‘ದಿ ಸಬರಮತಿ ರಿಪೋರ್ಟ್’ ಸಿನಿಮಾ ವೀಕ್ಷಿಸಿದ ಸಂಸದ ಚೌಟ

‘ದಿ ಸಬರಮತಿ ರಿಪೋರ್ಟ್’ ಸಿನಿಮಾ ವೀಕ್ಷಿಸಿದ ಸಂಸದ ಚೌಟ

ಮಂಗಳೂರು: ಗೋಧ್ರಾ ರೈಲು ದುರಂತವನ್ನು ಆಧರಿಸಿ ನಿರ್ಮಾಣಗೊಂಡಿರುವ ‘ದಿ ಸಬರಮತಿ ರಿಪೋರ್ಟ್’ ಸಿನಿಮಾವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬಿಜೆಪಿ ಕಾರ್ಯಕರ್ತರ ಜತೆಗೆ ಇಂದು ನಗರದ ಭಾರತ್ ಚಿತ್ರಮಂದಿರದಲ್ಲಿ ವೀಕ್ಷಣೆ ಮಾಡಿದ್ದಾರೆ.

ದಿ ಸಬರಮತಿ ರಿಪೋರ್ಟ್’ ಸಿನಿಮಾ ವೀಕ್ಷಣೆ ಬಳಿಕ ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ ಅವರು "ನಮ್ಮ ಶತಮಾನದ ಪ್ರಮುಖ ಘಟನೆಯ ಕುರಿತು ತಿಳಿಸುವ ಈ ಸಿನೆಮಾವನ್ನು ವೀಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ತಮ್ಮ ಎಕ್ಸ್ ಖಾತೆಯಲ್ಲಿ ಅನಿಸಿಕೆ ಹಂಚಿಕೊಂಡಿದ್ದರು ಅದರಂತೆ ಸಿನೆಮಾವನ್ನು ನಮ್ಮ ಕಾರ್ಯಕರ್ತರೊಂದಿಗೆ ವೀಕ್ಷಿಸಲು ಬಯಸಿದ್ದೆ. ಅದರಂತೆ ನಮ್ಮ ಪಾರ್ಟಿಯ ಕಾರ್ಯಕರ್ತರ ಜತೆಗೆ ಕುಳಿತುಕೊಂಡು 'ಸಬರಮತಿ ರಿಪೋರ್ಟ್' ಸಿನಿಮಾ ವೀಕ್ಷಿಸಿದ್ದು, ಸಾಮಾನ್ಯ ಜನರಿಗೂ ಅರ್ಥವಾಗುವ ರೀತಿಯಲ್ಲಿ ದೇಶದಲ್ಲಿ ನಡೆದಿದ್ದ ಈ ಮತೀಯ ಸಂಚಿನ ಹಿಂದಿನ ಸತ್ಯ ಸಿನಿಮಾ ರೂಪದಲ್ಲಿ ಹೊರಬಂದಿದೆ ಎಂದರು.

ಕೆಲ ವರ್ಷಗಳ ಹಿಂದೆ ನಡೆದು ಹೋದ ಅಮಾನವೀಯ ಘಟನೆಯ ಹಿಂದಿರುವ ಸತ್ಯ ವಿಚಾರಗಳಿಗೆ ಯಾವ ರೀತಿಯಲ್ಲಿ ರಾಜಕೀಯ ಬಣ್ಣ ಬಳಿಯಲಾಯಿತು ಎನ್ನುವುದನ್ನು ’ದಿ ಸಬರಮತಿ ರಿಪೋರ್ಟ್’ ಸಿನಿಮಾದಲ್ಲಿ ಬಹಳ ಅಚ್ಚುಕಟ್ಟಾಗಿ ಚಿತ್ರಿಸಲಾಗಿದೆ ಎಂದು ಕ್ಯಾ. ಚೌಟ ಹೇಳಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article