
ಶಕ್ತಿ ಪಿಯು ಕಾಲೇಜಿನ ವಿದ್ಯಾರ್ಥಿಗೆ ಕರಾಟೆಯಲ್ಲಿ ಪದಕ
Thursday, November 7, 2024
ಮಂಗಳೂರು: ಶಕ್ತಿ ಪ.ಪೂ.ಕಾಲೇಜಿನ ವಿದ್ಯಾರ್ಥಿ ಲಿಖಿತ್ ಎಸ್. ಸುವರ್ಣ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗ ಇವರು ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ದ.ಕ. ಜಿಲ್ಲಾ ಮಟ್ಟದ ಬಾಲಕ ಮತ್ತು ಬಾಲಕಿಯರ ಕರಾಟೆಯಲ್ಲಿ ಭಾಗವಹಿಸಿ ಕಂಚಿನ ಪದಕ ಪಡೆದಿದ್ದಾರೆ.
ಇವರನ್ನು ಸಂಸ್ಥೆಯ ಸಂಸ್ಥಾಪಕ ಡಾ. ಕೆ. ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್. ಪ್ರಧಾನ ಸಲಹೆಗಾರ ರಮೇಶ್ ಕೆ., ಪ್ರಾಂಶುಪಾಲ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.