
ರಾಜ್ಯ ಮಟ್ಟದ ಸಹಕಾರ ರತ್ನ ಪುರಸ್ಕಾರಕ್ಕೆ ಡಾ. ಎಸ್.ಆರ್. ಹರೀಶ್ ಆಚಾರ್ಯ ಆಯ್ಕೆ
Friday, November 15, 2024
ಮಂಗಳೂರು: ಸಹಕಾರ ಕ್ಷೇತ್ರದ ಸಾಧನೆಗಾಗಿ ನೀಡಲಾಗುವ ಸಹಕಾರ ರತ್ನ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷರಾದ, ಹಿರಿಯ ಸಹಕಾರಿ ವಿನಯಕುಮಾರ್ ಸೂರಿಂಜೆ ಮತ್ತು ವಿಶ್ವಕರ್ಮ ಸಹಕಾರ ಬ್ಯಾಂಕ್ ಹಾಗೂ ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ. ಎಸ್.ಆರ್. ಹರೀಶ್ ಆಚಾರ್ಯ ಇವರು ಆಯ್ಕೆಯಾಗಿದ್ದಾರೆ.
ರಾಜ್ಯದ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಹಕಾರ ರತ್ನ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿದ್ದು, ರಾಜ್ಯಾದ್ಯಂತ ಒಟ್ಟು 72 ಮಂದಿಗೆ ಪುರಸ್ಕಾರ ಘೋಷಿಸಲಾಗಿದೆ. ಕರಾವಳಿಯ ಉಭಯ ಜಿಲ್ಲೆಗಳಿಂದ ಶಿವಿನಯಕುಮಾರ್ ಸೂರಿಂಜೆ ಮತ್ತು ಡಾ. ಎಸ್ ಆರ್ ಹರೀಶ್ ಆಚಾರ್ಯ ಮಾತ್ರವಲ್ಲದೇ, ಕಂಬದಕೋಣೆ ರೈತರ ಸೇವಾ ಸಹಕಾರ ಸಂಘ ನಿ. ಉಪ್ಪುಂದ ಇದರ ಅಧ್ಯಕ್ಷರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಮೇಕೋಡು, ಇತರೇ ಸಹಕಾರ ಸಂಘಗಳ ನೌಕರರ ಒಕ್ಕೂಟ ನಿ. ಉಡುಪಿ ಇದರ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿಯಂಗಡಿ, ವಿಜಯಾ ಬ್ಯಾಂಕ್ ನೌಕರರ ಹೌಸಿಂಗ್ ಕೋಆಪರೇಟಿವ್ ಸೊಸೈಟಿ ಲಿ. ಇದರ ಮಾಜಿ ಅಧ್ಯಕ್ಷರಾದ ಎ.ನವೀನ್ ಭಂಡಾರಿ ಪುತ್ತೂರು ಇವರುಗಳು ಆಯ್ಕೆಯಾಗಿದ್ದಾರೆ.