
ಟೆಂಪೋ ಢಿಕ್ಕಿ ಮಗು ಸಾವು
Thursday, November 7, 2024
ಮಂಗಳೂರು: ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಟೆಂಪೋ ಹಿಮ್ಮುಖವಾಗಿ ಚಲಿಸಿ ಆಟವಾಡುತ್ತಿದ್ದ ಮೂರೂವರೆ ವರ್ಷದ ಮಗುವಿನ ಮೇಲೆ ಹರಿದು ಮಗು ಮೃತಪಟ್ಟಿರುವ ಘಟನೆ ಬಂಟ್ವಾಳಕ್ಕೆ ಸಮೀಪದ ಲೊರೆಟ್ಟೊಪದವು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.
ಫರಂಗಿಪೇಟೆ ಸಮೀಪದ 10ನೇ ಮೈಲುಗಲ್ಲು ನಿವಾಸಿ ಮರ್ಹೂಮ್ ಉನೈಸ್ ಎಂಬವರ ಮೂರವರೆ ವರ್ಷದ ಪುತ್ರಿ ಆಶಿಕಾ ಮೃತ ಬಾಲಕಿ ಎಂದು ಗುರುತಿಸಲಾಗಿದೆ.
ಲೊರೆಟ್ಟೊ ಪದವಿನ ಟಿಪ್ಪುನಗರದಲ್ಲಿರುವ ಅಜ್ಜಿ ಮನೆಗೆ ಬಂದಿದ್ದು, ಮಗು ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭ ಮನೆಯ ವರಾಂಡದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ಹಿಮ್ಮುಖವಾಗಿ ಚಲಿಸಿದ್ದು,ಈ ಸಂದರ್ಭ ಅಲ್ಲಿ ಆಟವಾಡಿತ್ತಿದ್ದ ಮಗುವಿಗೆ ಢಿಕ್ಕಿ ಹೊಡೆದಿದೆ.
ಇದರಿಂದ ಗಂಭೀರಗಾಯಗೊಂಡಿದ್ದ ಮಗುವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮಗು ಸಾವನ್ನಪ್ಪಿದೆ ಎಂದು ಪರೀಕ್ಷಿಸಿದ ವೈದ್ಯರು ತಿಳಿಸಿದ್ದಾರೆ.
ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.