ಯುವವಾಹಿನಿ ರಿ. ಕೇಂದ್ರ ಸಮಿತಿ ಮಂಗಳೂರು ಇದರ 37ನೇ ವಾರ್ಷಿಕ ಸಮಾವೇಶದ ಪೋಸ್ಟರ್ ಬಿಡುಗಡೆ

ಯುವವಾಹಿನಿ ರಿ. ಕೇಂದ್ರ ಸಮಿತಿ ಮಂಗಳೂರು ಇದರ 37ನೇ ವಾರ್ಷಿಕ ಸಮಾವೇಶದ ಪೋಸ್ಟರ್ ಬಿಡುಗಡೆ


ಮೂಡುಬಿದಿರೆ: ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಹಾಗೂ ಯುವವಾಹಿನಿ(ರಿ.) ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಡಿ. 29ರಂದು ಮೂಡುಬಿದಿರೆಯಲ್ಲಿ ನಡೆಯಲಿರುವ '37ನೇ ವಾರ್ಷಿಕ ಸಮಾವೇಶದ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಯನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಡಾ. ಎಂ ವೀರಪ್ಪ ಮೊಯ್ಲಿ ಅವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಪಿ.ಎಲ್. ಧರ್ಮ, ಪದ್ಮರಾಜ್ ಆರ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ, ಹಿರಿಯ ಸಾಹಿತಿ ಬಾಬು ಶಿವ ಪೂಜಾರಿ, ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಹರೀಶ್ ಕೆ. ಪೂಜಾರಿ, ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ., ವಿಶುಕುಮಾರ್ ದತ್ತಿ ನಿಧಿ ಸಂಚಾಲಕ ಸುರೇಶ ಪೂಜಾರಿ, ಪಣಂಬೂರು ಕುಳಾಯಿ ಘಟಕದ ಅಧ್ಯಕ್ಷೆ ಮನಿಷಾ ರೂಪೇಶ್, ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಯುವವಾಹಿನಿ  ಸಾಮಾಜಿಕ ಜಾಲತಾಣ ನಿರ್ದೇಶಕ ನವಾನಂದ, ಮೂಡುಬಿದಿರೆ ಯುವವಾಹಿನಿ ಉಪಾಧ್ಯಕ್ಷ ಪ್ರಭಾಕರ್ ಚಾಮುಂಡಿಬೆಟ್ಟ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article