
ಮೂಡುಬಿದಿರೆಯ ವಿದ್ಯಾರ್ಥಿ ಆತ್ಮಹತ್ಯೆ
Friday, November 22, 2024
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯೋರ್ವ ತಾನು ವಾಸ್ತವ್ಯವಿದ್ದ ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಹೊಸೂರು ಮೂಲದ ರವಿಕುಮಾರ್ ಎಂಬವರ ಮಗ ಶಶಾಂಕ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಶಶಾಂಕ್ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಆತ್ಮಹತ್ಯೆಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದನೆನ್ನಲಾಗಿದೆ.
ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಪ್ರಕರಣ ದಾಖಲಿಸಿಕೊಂಡಿದ್ದಾರೆ.