ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ. ನೇಮಿರಾಜ ಹೆಗ್ಡೆ ನಿಧನ

ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ. ನೇಮಿರಾಜ ಹೆಗ್ಡೆ ನಿಧನ


ಮಾಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ. ನೇಮಿರಾಜ ಹೆಗ್ಡೆ (84) ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೂಲತಃ ಪಡಂಗಡಿ ಯವರಾದ ನೇಮಿರಾಜ ಹೆಗ್ಡೆ ಅವರು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪಿಯು, ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಬಿಎಸ್ ಸಿ ಪದವಿ, ಮೈಸೂರಿನಲ್ಲಿ ಬಿ. ಪಿ.ಎಡ್. ಪದವಿ ಗಳಿಸಿದರು. 'ಮೂಡುಬಿದಿರೆ ಶ್ರೀಮಹಾವೀರ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ವೃತ್ತಿ ಜೀವನ ಪ್ರಾರಂಭಿಸಿ ಪೂರ್ಣ ಸೇವೆ ಸಲ್ಲಿಸಿ ಅಲ್ಲೇ ನಿವೃತ್ತಿ ಹೊಂದಿದರು.

ಕಾಲೇಜು ಜೀವನದಲ್ಲಿ ಎನ್ ಸಿ ಸಿ ಕೆಡೆಟ್ ಆಗಿ ರಾಷ್ಟ್ರಮಟ್ಟದ ಶಿಬಿರಗಳಲ್ಲಿ ಭಾಗವಹಿಸಿದ್ದರು. ಮಹಾವೀರ ಕಾಲೇಜಿನಲ್ಲಿ ವಿದ್ಯಾಥಿ೯ ಸ್ನೇಹಿಯಾಗಿದ್ದು ಅನೇಕ ಸಾಧಕ ಕ್ರೀಡಾಪಟುಗಳನ್ನು ರೂಪಿಸಿದ್ದರು.

ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಚೇತನಾ ಪ್ರಶಾಂತ್ ಸಹಿತ ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ.

ಸಂತಾಪ:

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಮಾಜಿ ಸಚಿವ ಕೆ. ಅಭಯಚಂದ್ರ, ಪದವಿ ಕಾಲೇಜ್ ಪ್ರಾಚಾರ್ಯ ಡಾ. ರಾಧಾಕೃಷ್ಣ ಪ.ಪೂ.ಕಾಲೇಜ್ ಪ್ರಾಚಾರ್ಯ ಎಂ. ರಮೇಶ್ ಭಟ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿ.ನಾಗರಾಜ್, ಆಳ್ವಾಸ್ ಶಿಕ್ಷಣ ಪ್ರತಿಸ್ಥಾನದ ಅಧ್ಯಕ್ಷ ಡಾ ಎಂ. ಮೋಹನ ಆಳ್ವ, ಎಂ. ಬಾಹುಬಲಿ ಪ್ರಸಾದ್ ಮೊದಲಾದವರು ನೇಮಿರಾಜ ಹೆಗ್ಡೆ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article