ನ.14-15 ರಂದು ವಿವೇಕಾನಂದ ಕಾಲೇಜ್‌ನಲ್ಲಿ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ

ನ.14-15 ರಂದು ವಿವೇಕಾನಂದ ಕಾಲೇಜ್‌ನಲ್ಲಿ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ

ಪುತ್ತೂರು: ಇಲ್ಲಿನ ವಿವೇಕಾನಂದ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಕಾಲೇಜ್‌ನ ಐಕ್ಯೂಎಸಿ, ಮಾನವಿಕ ವಿಭಾಗ ಹಾಗೂ ಭಾಷಾ ವಿಭಾಗಗಳ ಸಹಯೋಗಲ್ಲಿ ನ.14 ಮತ್ತು 15ರಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಮತ್ತು ಪ್ರಬಂಧ ಮಂಡನೆ ನಡೆಯಲಿದೆ ಎಂದು ಕಾಲೇಜ್‌ನ ಐಕ್ಯೂಎಸಿ ಸಂಯೋಜಕ ಹಾಗೂ ಡೀನ್ ಆಗಿರುವ ಪ್ರೊ. ಶಿವಪ್ರಸಾದ್ ತಿಳಿಸಿದ್ದಾರೆ.

ಅವರು ಮಂಗಳವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನ.14ರಂದು ಕಾಲೇಜ್‌ನ ಭಾಷಾ ವಿಭಾಗದಿಂದ ‘ಭಾಷಾ ಶಿಕ್ಷಣದ ಪ್ರಸ್ತುತ ಸ್ಥಿತಿಗತಿ ಹಾಗೂ ಭವಿಷ್ಯದ ಸಾಧ್ಯತೆ’ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ.  ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಕೆನರಾ ಕಾಲೇಜ್‌ನ ನಿವೃತ್ತ ಪ್ರಾಂಶುಪಾಲ ಡಾ. ಜಿ.ಎನ್. ಭಟ್ ಉದ್ಘಾಟಿಸಿ, ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಬಳಿಕ ನಡೆಯಲಿರುವ ವಿಚಾರಗೋಷ್ಠಿಯಲ್ಲಿ ನಿವೃತ್ತ ಪ್ರಾಂಶುಪಾಲರಾದ ಡಾ. ಜಿ.ಎನ್. ಭಟ್ ಮತ್ತು ಡಾ. ಎಚ್. ಮಾಧವ ಭಟ್,  ಕಾಸರಗೋಡು ಸ್ನಾತಕೋತ್ತರ ಕನ್ನಡ ಅಧ್ಯಯನ ಕೇಂದ್ರದ ಡಾ. ರಾಧಾಕೃಷ್ಣ ಬೆಳ್ಳೂರು, ಕೇರಳದ ಕೇಂದ್ರೀಯ ವಿಶ್ವವಿದ್ಯಾನಿಯದ ಹಿಂದಿ ವಿಭಾಗದ ಡಾ. ತಾರು ಎಸ್ ಪವಾರ್ ವಿಚಾರ ಮಂಡನೆ ಮಾಡಲಿದ್ದಾರೆ. ಅಪರಾಹ್ನ ಉಪನ್ಯಾಸಕರು, ಸಂಶೋಧನಾರ್ಥಿಗಳು ಮತ್ತು ವಿದ್ಯಾರ್ಥಿಗಳಿಂದ ವಿವಿಧ ವಿಚಾರಗಳ ಕುರಿತು ಪ್ರಬಂಧ ಮಂಡನೆ ನಡೆಯಲಿದೆ. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಟ್ಟಂಪಾಡಿ ಸರ್ಕಾರಿ ಪದವಿ ಕಾಲೇಜ್‌ನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಸಮಾರೋಪ ಭಾಷಣ ಮಾಡಿದ್ದಾರೆ. 

ನ.15ರಂದು ಕಾಲೇಜ್‌ನ ಮಾನವಿಕ ವಿಭಾಗದಿಂದ ‘ಸಮಾಜ ವಿಜ್ಞಾನದ ಪ್ರಸ್ತುತ ಸ್ಥಿತಿಗತಿ  ಹಾಗೂ ಭವಿಷ್ಯದ ಸಾಧ್ಯತೆಗಳು’ ವಿಷಯದ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಮುಂಬೈ ವಿಶ್ವವಿದ್ಯಾನಿಯದ ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥ ಡಾ. ವಸಂತ ಕುಮಾರ್ ತಾಳ್ತಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಹಾವೇರಿ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಸಿದ್ದಪ್ಪ ಟಿ ಬಾಗಲಕೋಟ್ ಉದ್ಘಾಟಿಸಿ, ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಬಳಿಕ ನಡೆಯಲಿರುವ ವಿಚಾರಗೋಷ್ಠಿಯಲ್ಲಿ ಕಾಲೇಜ್‌ನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ, ನಿವೃತ್ತ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್, ಹಾವೇರಿ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಎಸ್.ಟಿ. ಬಾಗಲಕೋಟ್ ಸಂಪನ್ಮೂಲ ವ್ಯಕ್ತಿಗಳಾಗಿ ವಿಚಾರ ಮಂಡನೆ ಮಾಡಲಿದ್ದಾರೆ. ಅಪರಾಹ್ನ ಉಪನ್ಯಾಸಕರು, ಸಂಶೋಧನಾರ್ಥಿಗಳು ಮತ್ತು ವಿದ್ಯಾರ್ಥಿಗಳಿಂದ ಮಾನವಿಕ ವಿಷಯಗಳಿಗೆ ಸಂಬಂಧಿಸಿದ ಪ್ರಬಂಧ ಮಂಡನೆ ನಡೆಯಲಿದೆ. 

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜ್‌ನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ವಹಿಸಲಿದ್ದಾರೆ. ತುಮಕೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಧ್ಯಾಪಕ ಡಾ. ರವೀಂದ್ರ ಬೈಪದವು ಸಮಾರೋಪ ಭಾಷಣ ಮಾಡಲಿದ್ದಾರೆ. ಕಾಲೇಜ್ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ವಿಚಾರ ಸಂಕಿರಣದ ಸಂಯೋಜಕಿಯರಾದ ವಿಜಯ ಸರಸ್ವತಿ, ಡಾ. ದುರ್ಗಾರತ್ನ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಹವ್ಯಶ್ರೀ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article