
ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ‘ಸರೋಜ್ ಮಧು-ಕಲಾ ಉತ್ಸವ-2024’ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ
Wednesday, November 27, 2024
ಪುತ್ತೂರು: ಸರೋಜಿನಿ ಮಧುಸೂದನ ಕುಶೆ, ಶಿಕ್ಷಣ ಸಂಸ್ಥೆಗಳು ಆಯೋಜಿಸಿದ ‘ಸರೋಜ್ ಮಧು-ಕಲಾ ಉತ್ಸವ-2024’ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ.
ಸಿಲಪ್ಪತಿಕಾರಂ ಭರತನಾಟ್ಯ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಅಂಗೀಕ ಶೆಟ್ಟಿ ಪ್ರಥಮ ಹಾಗೂ ದ್ವಿತೀಯ ಕಲಾ ವಿಭಾಗದ ವಿಷ್ಣುಪ್ರಿಯ ಕೆ.ವಿ ತೃತೀಯ ಸ್ಥಾನ ಮತ್ತು ಯುಗಳ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ನಿರ್ದೇಶಕರಾದ ಸುಮನಾ ರಾವ್, ರಶ್ಮಿ ಪಿ.ಎಸ್. ಹಾಗೂ ಭರತ್ ಜಿ. ಪೈ ಉಪಸ್ಥಿತರಿದ್ದರು.