ನ.8 ರಂದು ವಿವೇಕಾನಂದದಲ್ಲಿ ‘ಎನ್ನೋ-ಟೆಕ್-2024’ ರಾಜ್ಯಮಟ್ಟದ ವಿಚಾರ ಸಂಕಿರಣ

ನ.8 ರಂದು ವಿವೇಕಾನಂದದಲ್ಲಿ ‘ಎನ್ನೋ-ಟೆಕ್-2024’ ರಾಜ್ಯಮಟ್ಟದ ವಿಚಾರ ಸಂಕಿರಣ


ಪುತ್ತೂರು: ದಶಮಾನೋತ್ಸವ ಸಂಭ್ರಮದಲ್ಲಿರುವ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರವು ಕಳೆದ ಒಂದು ವರ್ಷದಿಂದ ದಶಮಾನೋತ್ಸವದ ಪ್ರಯುಕ್ತ ಹಲವು ಕಾರ್ಯಕ್ರಮಗಳು ಕಾಲೇಜಿನಲ್ಲಿ ನಡೆಯುತ್ತಾ ಬರುತ್ತಿದೆ. ಇದಕ್ಕೆ ಪೂರಕವಾಗಿ ’ಎನ್ನೋ -ಟೆಕ್ -2024’ ನಾಳೆಯ ಒಳಿತಿಗಾಗಿ ಸುಸ್ಥಿರ ಪರಿಹಾರ ಅನ್ನುವ ಧೈಯದೊಂದಿಗೆ ರಾಜ್ಯಮಟ್ಟದ ವಿಚಾರ ಸಂಕಿರಣ ಮತ್ತು ಪದವಿ ಮತ್ತು ಸ್ನಾತಕೊತ್ತರ ವಿದ್ಯಾರ್ಥಿಗಳಿಗೆ ಪ್ರಬಂಧ ಮಂಡನೆ, ಭಿತ್ತಿ ಪತ್ರ ವಿನ್ಯಾಸ ಕುರಿತ ಸ್ಪರ್ಧೆಯು ನ.8ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.

ಪತ್ರಿಕಾಗೋಷ್ಟಿಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಅವರು ಮಾತನಾಡಿ, ಪರಿಸರ ಮತ್ತು ಟೆಕ್ನಾಲಜಿಯನ್ನು ಮುಂದಿಟ್ಟು ವಿಚಾರ ಸಂಕಿರಣ ನಡೆಯಲಿದೆ. ಇದರಲ್ಲಿ ಸಂಶೋಧನ ಲೇಖನಗಳ ಪ್ರಬಂಧ ಮಂಡನೆ ಮತ್ತು ಭಿತ್ತಿ ಪತ್ರ ವಿನ್ಯಾಸದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಹಲವಾರು ಸಂಸ್ಥೆಗಳಿಂದ ಈಗಾಗಲೇ ವಿದ್ಯಾರ್ಥಿಗಳು ನೋಂದಾವಣೆ ಮಾಡಿಕೊಳ್ಳುತ್ತಿದ್ದಾರೆ ಎಂದ ಅವರು ಮಣಿಪಾಲದ ಎಂಐಟಿಯ ಜಿಯೋಲಜಿ ವಿಭಾಗದ ಪ್ರಾಧ್ಯಾಪಕ ಡಾ. ಕೆ.ಬಾಲಕೃಷ್ಣ ಅವರು ಕಾರ್ಯಕ್ರಮದ ಉದ್ಘಾಟನೆ ಮತ್ತು ದಿಕ್ಕೂಚಿ ಭಾಷಣ ಮಾಡಲಿದ್ದಾರೆ. 

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ಕೃಷ್ಣ ಭಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ಪರಿಸರ ತಜ್ಞ ಮತ್ತು ಅಂಕಣಕಾರ ಶಿವಾನಂದ ಕಳವೆ ಮತ್ತು ಡಾ. ಕೆ. ಬಾಲಕೃಷ್ಣ ಅವರು ವಿವಿಧ ವಿಷಯಗಳ ಕುರಿತಾಗಿ ಗೋಷ್ಟಿಗಳನ್ನು ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಎನ್ನೋ-ಟೆಕ್ ಎಂಬ ವಿಚಾರಕ್ಕೆ ಸಂಬಂಧಿಸಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರಬಂಧ ಮಂಡನೆ ಮತ್ತು ಭಿತ್ತಿಪತ್ರ ವಿನ್ಯಾಸ ಸ್ಪರ್ಧೆಯು ನಡೆಯಲಿದೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಚಾಲಕ ಮುರಳಿಕೃಷ್ಣ ಕೆ.ಎನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಸ್ಪರ್ಧಾ ವಿಜೇತರರಿಗೆ ಬಹುಮಾನ ವಿತರಣೆಯು ನಡೆಯಲಿದೆ ಎಂದವರು ಹೇಳಿದರು.

ಸ್ನಾತಕೋತ್ತರ ವಿಭಾಗದ ಡೀನ್ ಮತ್ತು ವಿಚಾರ ಸಂಕಿರಣದ ಸಂಯೋಜಕಿ ಡಾ. ವಿಜಯ ಸರಸ್ವತಿ ಅವರು ಮಾತನಾಡಿ ವಿವೇಕಾನಂದ ಸ್ನಾತಕೋತ್ತರ ವಿಭಾಗ 2013ರಲ್ಲಿ ಆರಂಭಗೊಂಡಿತ್ತು.ಎಂಕಾಂ, ಎಂಎಸ್ಸಿ ಕೆಮೆಸ್ಟ್ರೀ, ಮೆಥಮೆಟಿಕ್ ಮತ್ತು ಜರ್ನಲಿಸಮ್ ಎಂಬ ಸ್ನಾತಕೋತರ ನಾಲ್ಕು ವಿಭಾಗಳು ಯಶಸ್ವಿಯಾಗಿ 10 ವರ್ಷ ಪೂರ್ಣ ಮಾಡಿದೆ. ಹಲವಾರು ವಿದ್ಯಾರ್ಥಿಗಳು ಬೇರೆ ಬೇರೆ ಕಡೆಗಳಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಈ ನಿಟ್ಟಿನಲ್ಲಿ ದಶಮಾನೋತ್ಸವವನ್ನು ಸಂಭ್ರಮಿಸುವ ನಿಟ್ಟಿನಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿದೆ. ದಶಮಾನೋತ್ಸವದ ಕಾರ್ಯಕ್ರಮ ಫೆಬ್ರವರಿ ತಿಂಗಳಲ್ಲಿ ಸಮಾರೋಪಗೊಳ್ಳಲಿದೆ ಎಂದವರು ಹೇಳಿದರು. 

ಪತ್ರಿಕಾಗೋಷ್ಟಿಯಲ್ಲಿ ಸ್ನಾತಕೋತ್ತರ ವಿಜ್ಞಾನ ವಿಭಾಗದ ಸಂಯೋಜಕ ಶಿವಪ್ರಸಾದ್, ಸಂಯೋಜಕಿ ಡಾ. ವಿಜಯ ಸರಸ್ವತಿ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article