ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆ ಮತ್ತು ಪುಸ್ತಕ ಕೊಡುಗೆ ಕಾರ್ಯಕ್ರಮ

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆ ಮತ್ತು ಪುಸ್ತಕ ಕೊಡುಗೆ ಕಾರ್ಯಕ್ರಮ


ಪುತ್ತೂರು: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆ ಮತ್ತು ಪುಸ್ತಕ ಕೊಡುಗೆ ಕಾರ್ಯಕ್ರಮ ನ.20 ರಂದು ದಕ್ಷಿಣ ಕನ್ನಡ ಮತ್ತು ಕೊಡಗು ಲೈಬ್ರರಿ ಅಸೋಸಿಯೇಷನ್ (ರಿ.) ಉಡುಪಿ. ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ಹಾರಾಡಿಯ ದ.ಕ. ಜಿ.ಪ. ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟೀಯ ಗ್ರಂಥಾಲಯ ಸಪ್ತಾಹದ ಪ್ರಯುಕ್ತ 'ಶಾಲಾ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ'ಯಾಗಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷರು ಹಾಗೂ ನಿವೃತ್ತ ಪ್ರಾಧ್ಯಾಪಕ ಶ್ರೇಣಿ ಗ್ರಂಥಪಾಲಕ ಡಾ. ವಾಸಪ್ಪ ಗೌಡ, ನಿವೃತ್ತ ಆಯ್ಕೆ ಶ್ರೇಣಿ ಗ್ರಂಥಪಾಲಕರು ಮತ್ತು ಯೋಗ ಶಿಕ್ಷಕ ರಾಮಚಂದ್ರ, ಬೆಟ್ಟಂಪಾಡಿಯ ಸರಕಾರಿ ಪ್ರಥಮ‌ ದರ್ಜೆ ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕ ಪ್ರೊ. ರಾಮ ಕೆ, ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕ ಡಾ. ರವಿಚಂದ್ರ ನಾಯ್ಕ್ ಸೇರಿದಂತೆ  ಸಂಘದ ಇತರ ಸದಸ್ಯರು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರು ಹಾಗೂ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ  ಶಾಲೆಯ ಮುಖ್ಯಪಾಧ್ಯಾಯ ಕೆ.ಕೆ. ಸರ್ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸಿದರು. 

ಇದೇ ಸಂದರ್ಭದಲ್ಲಿ  ಕಾರ್ಯಕ್ರಮದ ಅತಿಥಿ ಪ್ರೊ. ರಾಮ ಕೆ. ಅವರು ವಿದ್ಯಾರ್ಥಿಗಳಿಗೆ ಓದುವ ಹವ್ಯಾಸದ ಮಹತ್ವ ಬಗ್ಗೆ ತಿಳಿಸಿ, ಪ್ರತಿ ವಿದ್ಯಾರ್ಥಿಗಳು ತಮ್ಮ ಹುಟ್ಟಿದ ದಿನಾಂಕದಂದು ಶಾಲಾ ಗ್ರಂಥಾಲಯಕ್ಕೆ ಒಂದು ಪುಸ್ತಕವನ್ನು ಕೊಡುಗೆಯಾಗಿ ನೀಡಬೇಕೆಂದು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು ಮತ್ತು ಪ್ರತಿಯೊಬ್ಬರೂ ವಿದ್ಯಾರ್ಥಿಗಳು ನೀಡಿದ ಪುಸ್ತಕವನ್ನು ಓದಿ ಜ್ಞಾನವಂತರಾಗಿ ಎಂದು ಹಾರೈಸಿದರು. 

ಕಾರ್ಯಕ್ರಮದ ಮುಖ್ಯ ಅತಿಥಿ ಡಾ. ವಾಸಪ್ಪ ಗೌಡ ಅವರು ಸಪ್ತಾಹದ ಉದ್ದೇಶ ಮತ್ತು ಗ್ರಂಥಪಾಲಕರ ಸಂಘ ನಡೆಸುವ ಈ ಕಾರ್ಯಕ್ರಮದ ಮಹತ್ವವನ್ನ ವಿವರಿಸಿ ಎಲ್ಲ ವಿದ್ಯಾರ್ಥಿಗಳು ಜ್ಞಾನವಂತರಾಗಿ ದೇಶದ ಉತ್ತಮ ಪ್ರಜೆಗಳಾಗಿ ಎಂದು ಹೇಳಿದರು.

 ಮುಖ್ಯ ಅತಿಥಿ ರಾಮಚಂದ್ರ ಅವರು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಿ ವಿದ್ಯಾರ್ಥಿಗಳ ಜ್ಞಾನವನ್ನು ಹೇಗೆ ಹೆಚ್ಚಿಸಬಹುದು. ವಿದ್ಯಾರ್ಥಿಗಳು ಹೇಗೆ ನೆನಪಿನ ಶಕ್ತಿಯನ್ನು ವೃದ್ಧಿಸಿಕೊಳ್ಳುವ ಕ್ರಮವನ್ನು ಅಚ್ಚುಕಟ್ಟಾಗಿ ವಿವರಿಸಿದರು.

ಇದಲ್ಲದೆ ರಸಪ್ರಶ್ನೆಗಳಿಗೆ ಉತ್ತರಿಸಿದ ವಿದ್ಯಾರ್ಥಿಗಳ ಬಹುಮಾನವನ್ನು ವಿತರಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಸಿಹಿ ಹಂಚಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರು, ಎಸ್.ಡಿ.ಎಂ.ಸಿ. ಅಧ್ಯಕ್ಷರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ  ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು. ಪುತ್ತೂರಿನ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ಗ್ರಂಥಪಾಲಕ  ಡಾ. ರವಿಚಂದ್ರ ನಾಯ್ಕ ಅವರು ಅಭಿನಂದಿಸಿದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article