ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ

ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ


ಸುಬ್ರಹ್ಮಣ್ಯ: ನಾಗರಾಧನೆಯ ಪ್ರಸಿದ್ಧ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ಟಿ-20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಅವರ ಪತ್ನಿ ದೀವಿಶಾ ಶೆಟ್ಟಿ ಮಂಗಳವಾರ ಭೇಟಿ ನೀಡಿದರು.

ಶ್ರೀ ದೇವಳದಲ್ಲಿ ಮಹಾಭಿಷೇಕದಲ್ಲಿ ಪಾಲ್ಗೊಂಡು ದೇವರಪ್ರಸಾದ  ಸ್ವೀಕರಿಸಿದರು. ತದನಂತರ ದೇವಳದ ಆಡಳಿತ ಕಚೇರಿಯಲ್ಲಿ ಈ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಶತಗೊಂಡಿ ಅವರು ಸೂರ್ಯ ಕುಮಾರ ದಂಪತಿಯವರನ್ನು ಶಾಲು ಹೊದಿಸಿ ಫಲ ಪುಷ್ಪ ನೀಡಿ ಗೌರವಿಸಿದರು .ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಶಿಷ್ಟಾಚಾರ ವಿಭಾಗದ ಜಯರಾಮ್ ರಾವ್, ಪ್ರಮೋದ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಈ ಸಂಪುಟ ನರಸಿಂಹಸ್ವಾಮಿ ಮಠದಲ್ಲಿ ಆಶ್ಲೇಷ ಬಲಿ ಸೇವೆಯನ್ನು ಸಲ್ಲಿಸಿ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿಯವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article