ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ

ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ


ಉಡುಪಿ: ನೇತ್ರಾವತಿ ದಳದ ನಕ್ಸಲ್ ನಾಯಕ, ಕಬ್ಬಿನಾಲೆ ಮೂಲದ ವಿಕ್ರಂ ಗೌಡನನ್ನು ನಕ್ಸಲ್ ನಿಗ್ರಹ ದಳ (ಎಎನ್‌ಎಫ್) ಪೊಲೀಸರು ಸೋಮವಾರ ರಾತ್ರಿ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಕಂಡುಬಂದ ಹಿನ್ನೆಲೆಯಲ್ಲಿ ಎಎನ್‌ಎಫ್ ತಂಡ ಕೂಂಬಿಂಗ್ ತೀವ್ರಗೊಳಿಸಿತ್ತು.

ಹೆಬ್ರಿ ಪರಿಸರದ ಕಬ್ಬಿನಾಲೆ, ಪೀತಬೈಲುಗಳಲ್ಲಿ ನಾಲ್ವರು ನಕ್ಸಲರು ಓಡಾಡುತ್ತಿದ್ದ ಮಾಹಿತಿಯ ಹಿನ್ನೆಲೆಯಲ್ಲಿ ಎಎನ್‌ಎಫ್ ಕಾರ್ಯಾಚರಣೆ ನಡೆಸಿದ್ದು, ಈನಡುವೆ ಎಎನ್‌ಎಫ್ ಮತ್ತು ನಕ್ಸಲರ ನಡುವೆ ಸೋಮವಾರ ರಾತ್ರಿ ಮುಖಾಮುಖಿಯಾಗಿ ಗುಂಡಿನ ಕಾಳಗ ನಡೆದಾಗ ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಗುಂಡು ತಗುಲಿ ಮೃತಪಟ್ಟಿದ್ದಾನೆ. ಇನ್ನೂ ಮೂವರು ಕಾಡಿನಲ್ಲಿ ತಲೆಮರೆಸಿಕೊಂಡಿದ್ದಾರೆ.

ಕಾರ್ಕಳ, ಹೆಬ್ರಿ ಸಹಿತ ವಿವಿಧ ಪಶ್ಚಿಮಘಟ್ಟದ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಂಡಿದೆ. ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article