
ನ.14 ರಂದು ಧರ್ಮಸ್ಥಳದಲ್ಲಿ ಆಸನ ವ್ಯವಸ್ಥೆಗಳನ್ನು ಹೊಂದಿರುವ ಭೋಜನಾಲಯ ಉದ್ಘಾಟನೆ
Saturday, November 9, 2024
ಉಜಿರೆ: ಧರ್ಮಸ್ಥಳದಲ್ಲಿ ಅನ್ನಪೂರ್ಣ ಭೋಜನಾಲಯದ ಮೇಲಂತಸ್ತಿನಲ್ಲಿ ನಿರ್ಮಿಸಲಾದ ಸುಸಜ್ಜಿತ ಆಸನ ವ್ಯವಸ್ಥೆಗಳನ್ನು ಹೊಂದಿರುವ ಭೋಜನಾಲಯವನ್ನು ನ.14 ರಂದು ಸಂಜೆ 5 ಗಂಟೆಗೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಉದ್ಘಾಟಿಸುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷತೆ ವಹಿಸುವರು.
ಶಾಸಕರುಗಳಾದ ಹರೀಶ್ ಪೂಂಜ ಮತ್ತು ಕೆ. ಪ್ರತಾಪಸಿಂಹ ನಾಯಕ್, ಕೆ.ಪಿ.ಸಿ.ಸಿ. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಕೆ. ಹರೀಶ್ ಕುಮಾರ್ ಮತ್ತು ಡಿ. ಸುರೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಾಶಂಸನೆ ಮಾಡುವರು.