ನ.14 ರಂದು ಧರ್ಮಸ್ಥಳಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ನ.14 ರಂದು ಧರ್ಮಸ್ಥಳಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ನ.14 ರಂದು ಬೆಳಿಗ್ಗೆ 10 ಗಂಟೆಗೆ ಧರ್ಮಸ್ಥಳದ  ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿರುವ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಲಿದ್ದಾರೆ ಎಂದು ಎಸ್‌ಕೆಡಿಆರ್‌ಡಿಪಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್.  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ನಬಾರ್ಡ್ ಬ್ಯಾಂಕ್ ಅಧ್ಯಕ್ಷ ಶಾಜಿ ಕೆ.ವಿ. ಮುಂಬಯಿ, ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ಹೆಗ್ಗಡೆ, ಸಂಸದ ಕ್ಯಾ. ಬೃಜೇಶ್ ಚೌಟ, ಶಾಸಕ ಹರೀಶ್ ಪೂಂಜ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಒಂದು ಲಾಭರಹಿತ ಉದ್ದೇಶದೊಂದಿಗೆ ಚಾರಿಟೇಬಲ್ ಟ್ರಸ್ಟ್ ಆಗಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸ್ಥಾಪಿಸಿದ್ದಾರೆ. ನಾಲ್ಕು ದಶಕಗಳಿಂದ ಸಂಸ್ಥೆಯು ಗ್ರಾಮೀಣ ಪ್ರದೇಶದ ರೈತರು, ಮಹಿಳೆಯರು ಮತ್ತು ಬಡವರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ಶ್ರಮಿಸುತ್ತಿದೆ.

ಸಾಲಿನಲ್ಲಿ ರೂ.600 ಕೋಟಿಗೂ ಹೆಚ್ಚು ಲಾಭಾಂಶವನ್ನು ಅರ್ಹ ಸಂಘಗಳಿಗೆ ಸಮಾರಂಭದಲ್ಲಿ ವಿತರಿಸಲಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article